ಕಾಲೇಜುಗಳಲ್ಲಿ 'ಫ್ಯಾಷನ್ ಶೋ' ನಿಷೇಧ..?

ಲಕ್ಷ್ಮೀ ಸುರೇಶ್ ಎಂಬುವವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್, ಕಾಲೇಜುಗಳಲ್ಲಿ ಇನ್ನು ಮುಂದೆ ಸೌಂದರ್ಯ ಸ್ಪರ್ಧೆಗಳನ್ನು ನಡೆಸುವಂತಿಲ್ಲ...
ಕಾಲೇಜುಗಳಲ್ಲಿ ಸೌಂದರ್ಯ ಸ್ಪರ್ಧೆ (ಸಾಂದರ್ಭಿಕ ಚಿತ್ರ)
ಕಾಲೇಜುಗಳಲ್ಲಿ ಸೌಂದರ್ಯ ಸ್ಪರ್ಧೆ (ಸಾಂದರ್ಭಿಕ ಚಿತ್ರ)

ಚೆನ್ನೈ: ತಮಿಳುನಾಡಿನ ಕಾಲೇಜುಗಳಲ್ಲಿ ಸೌಂದರ್ಯ ಸ್ಪರ್ಧೆಗಳನ್ನು ನಿಷೇಧಿಸಬೇಕು ಎಂದು ಮದ್ರಾಸ್ ಹೈಕೋರ್ಟ್ ತೀರ್ಪು ಹೇಳಿದೆ.

ಲಕ್ಷ್ಮೀ ಸುರೇಶ್ ಎಂಬುವವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್, ಕಾಲೇಜುಗಳಲ್ಲಿ ಇನ್ನು ಮುಂದೆ ಸೌಂದರ್ಯ ಸ್ಪರ್ಧೆಗಳನ್ನು ನಡೆಸುವಂತಿಲ್ಲ ಎಂದು ಆದೇಶ ನೀಡಿದೆ. ಕಾಲೇಜುಗಳ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸೌಂದರ್ಯ ಸ್ಪರ್ಧೆಗಳನ್ನು ಆಯೋಜಿಸುವ ಅವಶ್ಯಕತೆಯಾದರೂ ಏನಿದೆ ಎಂದು ಪ್ರಶ್ನಿಸಿರುವ ಹೈಕೋರ್ಟ್ ಕಾಲೇಜುಗಳಲ್ಲಿ ಸೌಂದರ್ಯ ಸ್ಪರ್ಧೆಗಳನ್ನು ನಿಷೇಧಿಸುವಂತೆ ಮಧ್ಯಂತರ ಆದೇಶ ನೀಡಿದೆ. ಅಲ್ಲದೆ ಮುಂದಿನ ವಿಚಾರಣೆಯನ್ನ ಮೇ 22ಕ್ಕೆ ಮುಂದೂಡಿದೆ.

ಅಣ್ಣಾ ಯುನಿವರ್ಸಿಟಿಯ ಕಾಲೇಜೊಂದರಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿಯಾಗಿದ್ದ ತಮ್ಮ ಮಗಳು ಕಾಲೇಜಿನಲ್ಲಿ ಏರ್ಪಡಿಸಿದ್ದ ಮಿಸ್ ಟೆಕ್ಕೋಫೆಸ್ ಸೌಂದರ್ಯ ಸ್ಪರ್ಧೆಯಲ್ಲಿ ಜಯಗಳಿಸಿದ್ದಳು. ಆದರೆ ಕಾಲೇಜು ತಮ್ಮ ಮಗಳಿಗೆ ನಕಲಿ ಸರ್ಟಿಫಿಕೇಟ್ ನೀಡಿದ್ದು, ಬಹುಮಾನದ ಮೊತ್ತವನ್ನೂ ಕೂಡ ಈವರೆಗೂ ನೀಡಿಲ್ಲ ಎಂದು ಆರೋಪಿಸಿ ಫೆಬ್ರವರಿ 2013ರಲ್ಲಿ  ಲಕ್ಷ್ಮೀ ಸುರೇಶ್ ನ್ಯಾಯಾಲಯದ ಮೆಟ್ಟಿಲೇರಿದ್ದರು.

ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಟಿ.ಎಸ್ ಶಿವಜ್ಞಾನಂ ನೇತೃತ್ವದ ಪೀಠ, ಎಂಜಿನಿಯರಿಂಗ್ ಓದುವ ವಿದ್ಯಾರ್ಥಿಗಳಿಗೆ ಅದು ಹೇಗೆ ರ್ಯಾಂಪ್ ವಾಕ್ ಸಹಕಾರಿಯಾಗುತ್ತದೆ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಇಂತಹ ಸ್ಪರ್ಧೆಗಳನ್ನು ಕಾಲೇಜು, ವಿಶ್ವವಿದ್ಯಾಲಯ ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲೂ ನಿಷೇಧಿಸಬೇಕು ಎಂದು ತಮಿಳುನಾಡು ಸರ್ಕಾರಕ್ಕೆ ನಿರ್ದೇಶನ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com