
ಪಾಟ್ನಾ: ಬಿಹಾರ ವಿಧಾನಸಭೆ ವಿಸರ್ಜನೆಗೆ ಶಿಫಾರಸ್ಸು ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಅವರನ್ನು ಪಕ್ಷದಿಂದ ವಜಾ ಮಾಡಲಾಗಿದೆ.
ಜೆಡಿಯು ಮುಖ್ಯಸ್ಥ ಶರದ್ ಪವಾರ್ ಅವರ ನೇತೃತ್ವದಲ್ಲಿ ನಡೆದ ಶಾಸಕಾಂಗ ಪಕ್ಷದಲ್ಲಿ ಜಿತನ್ ರಾಮ್ ಮಾಂಝಿ ಅವರನ್ನು ಪಕ್ಷದಿಂದ ವಜಾ ಮಾಡಲಾಗಿದ್ದು, ಶಾಸಕಾಂಗ ಪಕ್ಷದ ನಾಯಕನಾಗಿ ಬಿಹಾರ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ.
ಪಾಟ್ನಾದಲ್ಲಿ ನಡೆದ ಜೆಡಿಯು ಶಾಸಕಾಂಗ ಸಭೆಯಲ್ಲಿ 97 ಶಾಸಕರು ಭಾಗಿಯಾಗಿದ್ದು, ಮಾಂಝಿ ಅವರ ವಜಾ ಹಾಗೂ ನಿತೀಶ್ ಕುಮಾರ ಆಯ್ಕೆಗೆ ಒಮ್ಮತದ ಅಭಿಪ್ರಾಯ ನೀಡಿದ್ದಾರೆ.
ಜೆಡಿಯು ಶಾಸಕಾಂಗ ಪಕ್ಷದ ನಾಯಕನಾಗಿ ನಿತೀಶ್ ಕುಮಾರ್ ಆಯ್ಕೆಯಾಗಿದ್ದು, ನಿತೀಶ್ ಬಿಹಾರದ ನೂತನ ಮುಖ್ಯಮಂತ್ರಿಯಾಗಲಿದ್ದಾರೆ.
Advertisement