

ಅಹಮದಾಬಾದ್: 2012ರಲ್ಲಿ ಗುಜರಾತ್ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ವೇಳೆ ದೋಷಪೂರಿತ ಪ್ರಮಾಣ ಪತ್ರ ಸಲ್ಲಿಸಿದ್ದಾರೆಂದು ಆರೋಪಿಸಿ ಆಮ್ ಆದ್ಮಿ ಪಕ್ಷದ ಮುಖಂಡರೊಬ್ಬರು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿ ಅಹಮದಾಬಾದ್ ಜಿಲ್ಲಾ ಹೆಚ್ಚುವರಿ ನ್ಯಾಯಾಲಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕ್ಲೀನ್ ಚಿಟ್ ನೀಡಿದೆ.
ಪ್ರಮಾಣ ಪತ್ರದಲ್ಲಿ ಪ್ರಧಾನಿ ಅವರು ತಮ್ಮ ಮದುವೆ ವಿಚಾರವನ್ನು ಮುಚ್ಚಿಟ್ಟಿದ್ದರು ಎಂದು ಆರೋಪಿಸಿ ಈ ಅರ್ಜಿ ಸಲ್ಲಿಸಲಾಗಿತ್ತು.
ಆದರೆ, ಅರ್ಜಿ ತಿರಸ್ಕರಿಸಿದ ನ್ಯಾಯಾಲಯ ಅರ್ಜಿ ಸಲ್ಲಿಸಿದ ವ್ಯಕ್ತಿ ಮೋದಿ ಅವರು ಸ್ಪರ್ಧಿಸಿದ್ದ ಮಣಿನಗರದ ಮತದಾರ ಅಲ್ಲ. ಜತೆಗೆ, ಅವಧಿ ಮೀರಿದ ಬಳಿಕ ಈ ಅರ್ಜಿ ಸಲ್ಲಿಸಲಾಗಿದೆ. ಹಾಗಾಗಿ ಈ ಅರ್ಜಿಯನ್ನು ಪುರಸ್ಕರಿಸುವುದರಲ್ಲಿ ಅರ್ಥ ಇಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.