ಹೆಚ್ಚು ಮದುವೆಯಾಗಿ ಹೆಚ್ಚು ಮಕ್ಕಳನ್ನು ಹಡೆಯಿರಿ: ಆಶಿಕ್ ಹುಸೇನ್

ಮುಸ್ಲಿಂ ಪುರುಷರು ಒಂದಕ್ಕಿಂತ ಹೆಚ್ಚು ಹೆಣ್ಣು ಮಕ್ಕಳನ್ನು ಮದುವೆಯಾಗಿ ಹೆಚ್ಚು ಮಕ್ಕಳನ್ನು ಪಡೆಯಬೇಕು...
ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಆಶಿಕ್ ಹುಸೇನ್ ಫಕ್ತೂ
ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಆಶಿಕ್ ಹುಸೇನ್ ಫಕ್ತೂ

ಶ್ರೀನಗರ: ಮುಸ್ಲಿಂ ಪುರುಷರು ಒಂದಕ್ಕಿಂತ ಹೆಚ್ಚು ಹೆಣ್ಣು ಮಕ್ಕಳನ್ನು ಮದುವೆಯಾಗಿ ಹೆಚ್ಚು ಮಕ್ಕಳನ್ನು ಪಡೆಯಬೇಕು ಎಂದು ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಹಾಗೂ ಕೇಂದ್ರ ಕಾರಾಗೃಹದ ಅತಿಥಿ ಆಶಿಕ್ ಹುಸೇನ್ ಫಕ್ತೂ ಶನಿವಾರ ಹೇಳಿದ್ದಾರೆ.

ಹಿಂದೂ ಮಹಿಳೆಯರು ನಾಲ್ಕು ಮಕ್ಕಳನ್ನು ಹೆರಬೇಕು ಎಂಬ ಸಾಕ್ಷಿ ಮಹಾರಾಜ್ ಅವರ ವಿವಾದಾತ್ಮಕ ಹೇಳಿಕೆಗೆ ಬಿಜೆಪಿ ಸಂಸದೆ ಸಾಧ್ವಿ ಪ್ರಾಚಿ ಸಾಥ್ ನೀಡಿರುವ ಕುರಿತಂತೆ ಇಂದು ಕೇಂದ್ರ ಕಾರಾಗೃಹದಲ್ಲಿ ಪ್ರತಿಕ್ರಿಯೆ ನೀಡಿರುವ ಕಾಶ್ಮೀರದ ಪ್ರತ್ಯೇಕತಾವಾದಿ ಆಶಿಕ್ ಹುಸೇನ್, ಜಮ್ಮು ಮತ್ತು ಕಾಶ್ಮೀರದ ಮುಸ್ಲಿಂ ಪುರುಷರು ಹೆಚ್ಚಿನ ಸಂಖ್ಯೆಯಲ್ಲಿ ಮದುವೆಯಾಗಿ ಸಾಧ್ಯವಾದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳನ್ನು ಪಡೆಯಬೇಕು. ಮಕ್ಕಳ ಪ್ರಾಮುಖ್ಯತೆ ಕುರಿತಂತೆ ಸ್ಥಳೀಯ ಧಾರ್ಮಿಕ ಮುಖಂಡರು ಹಾಗೂ ಗುರುಗಳು ಜನರಲ್ಲಿ ಅರಿವು ಮೂಡಿಸುವ ಕೆಲಸವನ್ನು ಮಾಡಬೇಕು. ಜನಸಂಖ್ಯಾ ನಿಯಂತ್ರಣಕ್ಕಾಗಿ ವೈದ್ಯರು ಮಾಡುತ್ತಿರುವ ಶಸ್ತ್ರಚಿಕಿತ್ಸೆಗಳನ್ನು ಕೈಗೊಳ್ಳಬಾರದು ಎಂದು ಹೇಳಿದ್ದಾರೆ.

1947 ರಿಂದಲೂ ಭಾರತ ಮುಸ್ಲಿಮರನ್ನು ಅಲ್ಪಸಂಖ್ಯಾತರನ್ನಾಗಿಸುವ ಕೆಲಸವನ್ನು ಮಾಡಲು ಪ್ರಯತ್ನಿಸುತ್ತಿದ್ದು, ಭಾರತ ನೀಡಿದ್ದ ಭರವಸೆಯನ್ನು ಈಡೇರಿಸಿಕೊಳ್ಳಲು ಇಂದಿಗೂ ಜಮ್ಮು ಮತ್ತು ಕಾಶ್ಮೀರದ ಮುಸ್ಲಿಂ ಜನರು ಸ್ವಯಂ ಅಧಿಕಾರದ ಹಕ್ಕಿಗಾಗಿ ಹೋರಾಟ ನಡೆಸುತ್ತಲೇ ಇದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೇ ಪಶ್ಚಿಮ ಪಾಕಿಸ್ತಾನದ ಬಹುತೇಕ ಮುಸ್ಲಿಮರು ನಿರಾಶ್ರಿತರು ಹಾಗೂ ಅಲ್ಪಸಂಖ್ಯಾತರಾಗಿದ್ದು, ಇಂತಹ ಪರಿಸ್ಥಿತಿಯಲ್ಲಿ ಮುಸ್ಲಿಮರು ಹೆಚ್ಚು ಮಕ್ಕಳನ್ನು ಪಡೆಯುವುದು ಅಗತ್ಯವಾಗಿದೆ ಎಂದಿದ್ದಾರೆ.

ಆಶಿಕ್ ಹುಸೇನ್ ಫಕ್ತೂ ಮುಸ್ಲಿಮರ ಪ್ರತ್ಯೇಕತಾವಾದಿ ನಾಯಕರಾಗಿದ್ದು, ಪಾಕಿಸ್ತಾನದ ಪ್ರತ್ಯೇಕತಾವಾದಿ ಮಹಿಳಾ ಗುಂಪಿನ ನಾಯಕಿ ಅಸಿಯಾ ಅಂದ್ರಾಬಿ ಅವರನ್ನು ವಿವಾಹವಾಗಿದ್ದರು. 1992 ರಲ್ಲಿ ಕಾಶ್ಮೀರದ ಪಂಡಿತ್ ಮಾನವ ಹಕ್ಕುಗಳ ಕಾರ್ಯಕರ್ತರಾಗಿದ್ದ ಹೃದಯ ನಾಥ್ ವಾಂಚೂ ಅವರ ಹತ್ಯೆಯಲ್ಲಿ ಪಾಲ್ಗೊಂಡಿರುವ ಕುರಿತಂತೆ 2003ರಲ್ಲಿ ನ್ಯಾಯಾಲಯವು ಆಶಿಕ್ ಹುಸೇನ್‌ಗೆ ಜೀವಾವಧಿ ಶಿಕ್ಷೆಯನ್ನು ನೀಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com