ರೋಹಟಕ್ 'ಹತ್ಯಾಚಾರ': 9ನೇ ಆರೋಪಿ ಆತ್ಮಹತ್ಯೆ

ನಿರ್ಭಯಾ ಪ್ರಕರಣವನ್ನು ನೆನಪಿಸುತ್ತಿರುವ ರೋಹಟಕ್ 'ಹತ್ಯಾಚಾರ' ಪ್ರಕರಣದ 9ನೇ ಆರೋಪಿ ಆತ್ಮಹತ್ಯೆಗೆ...
ಅತ್ಯಾಚಾರ ವಿರೋಧಿಸಿ ಪ್ರತಿಭಟನೆ (ಸಂಗ್ರಹ ಚಿತ್ರ)
ಅತ್ಯಾಚಾರ ವಿರೋಧಿಸಿ ಪ್ರತಿಭಟನೆ (ಸಂಗ್ರಹ ಚಿತ್ರ)
Updated on

ನವದೆಹಲಿ: ನಿರ್ಭಯಾ ಪ್ರಕರಣವನ್ನು ನೆನಪಿಸುತ್ತಿರುವ ರೋಹಟಕ್ 'ಹತ್ಯಾಚಾರ' ಪ್ರಕರಣದ 9ನೇ ಆರೋಪಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಹರ್ಯಾಣದ ರೋಹಟಕ್‌ನಲ್ಲಿ ಕಳೆದ ಫೆಬ್ರವರಿ 4ರಂದು ನಡೆದಿದ್ದ ಸಾಮೂಹಿಕ ಅತ್ಯಾಚಾರ ಮತ್ತು ಬರ್ಬರ ಹತ್ಯೆ ಪ್ರಕರಣ ಸಂಬಂಧ ಈಗಾಗಲೇ ಪೊಲೀಸರು 8 ಮಂದಿ ಆರೋಪಿಗಳನ್ನು ಬಂಧಿಸಿದ್ದು, 9ನೇ ಆರೋಪಿಗಾಗಿ ಶೋಧ ನಡೆಸುತ್ತಿದ್ದರು. ಆದರೆ ಪೊಲೀಸ್ ಮೂಲಗಳ ಪ್ರಕಾರ ನಾಪತ್ತೆಯಾಗಿದ್ದ ಪ್ರಕರಣದ 9ನೇ ಆರೋಪಿ ನ್ಯಾಯಾಲಯದ ವಿಚಾರಣೆಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಅತ್ಯಾಚಾರ ಪ್ರಕರಣ ಸಂಬಂಧ 8 ಮಂದಿ ಆರೋಪಿಗಳ ಬಂಧನದಿಂದಾಗಿ ಭಯಭೀತನಾಗಿದ್ದ 9ನೇ ಆರೋಪಿ ವಿಷ ಸೇವಿಸಿದ್ದು, ತೀವ್ರ ಅಸ್ವಸ್ಥಗೊಂಡಿದ್ದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ವೇಳೆ ಪೊಲೀಸರು ವಿಚಾರಣೆ ನಡೆಸಿದ್ದು, ರೋಹಟಕ್ ಅತ್ಯಾಚಾರ ಪ್ರಕರಣದಲ್ಲಿ ಈತ ಕೂಡ ಭಾಗಿಯಾಗಿರುವ ವಿಚಾರ ತಿಳಿದಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ 9ನೇ ಆರೋಪಿ ಇಂದು ಮೃತಪಟ್ಟಿದ್ದಾನೆ ಎಂದು ಹೇಳಲಾಗುತ್ತಿದೆ.

ದೆಹಲಿಯಿಂದ ಕೇವಲ 80 ಕಿ.ಮೀ. ದೂರದಲ್ಲಿರುವ ರೋಹಟಕ್ ಸಮೀಪದ ಗ್ರಾಮದಲ್ಲಿ 8 ಆರೋಪಿಗಳನ್ನು ಇಂದು ಪೊಲೀಸರು ಬಂಧಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com