ದೆಹಲಿ ಫಲಿತಾಂಶ: ಎಎಪಿಗೆ ಭಾರೀ ಮುನ್ನಡೆ, ಬಿಜೆಪಿಗೆ ಹಿನ್ನಡೆ

ದೇಶಾದ್ಯಂತ ಕುತೂಹಲ ಕೆರಳಿಸಿರುವ ದೆಹಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು...
ದೆಹಲಿ ಫಲಿತಾಂಶ: ಎಎಪಿಗೆ ಭಾರೀ ಮುನ್ನಡೆ, ಬಿಜೆಪಿಗೆ ಹಿನ್ನಡೆ

ನವದೆಹಲಿ: ದೇಶಾದ್ಯಂತ ಕುತೂಹಲ ಕೆರಳಿಸಿರುವ ದೆಹಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಆಮ್ ಆದ್ಮಿ ಪಕ್ಷ (ಎಎಪಿ) ಭಾರೀ ಮುನ್ನಡೆ ಸಾಧಿಸಿದೆ.

ದೆಹಲಿ ವಿಧಾನಸಭೆಯಲ್ಲಿ ಕಳೆದ ಬಾರಿ 28 ಸ್ಥಾನಗಳಲ್ಲಿ ಗೆದ್ದಿದ್ದ ಎಎಪಿ ಈ ಬಾರಿ 59 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕಳೆದ ಬಾರಿ 31 ಸ್ಥಾನಗಳಲ್ಲಿ ಗೆದ್ದಿದ್ದ ಬಿಜೆಪಿ ಈ ಬಾರಿ 11 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು ಭಾರೀ ಹಿನ್ನಡೆ ಅನುಭವಿಸಿದೆ. ಕಾಂಗ್ರೆಸ್ ಕೇವಲ 1 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದು, ತೀವ್ರ ಮುಖಭಂಗವಾಗಿದೆ.

ಕೃಷ್ಣ ನಗರದ ಕ್ಷೇತ್ರದಲ್ಲಿ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಕಿರಣ್ ಬೇಡಿ ಅವರಿಗೆ ಭಾರೀ ಹಿನ್ನಡೆಯಾಗಿದ್ದು, ಇವರನ್ನು ಹಿಂದಿಕ್ಕಿರುವ ಎಎಪಿ ಅಧ್ಯರ್ಥಿ ಎಸ್.ಕೆ ಬಗ್ಗಾ 1,300 ಮತಗಳ ಅಂತರದಿಂದ ಮುನ್ನಡೆಯಲ್ಲಿದ್ದಾರೆ ಎಂದು ತಿಳಿದು ಬಂದಿದೆ.

ಮತದಾರರು ಫೆ.7ರಂದು ಬರೆದಿದ್ದ ಆಪ್, ಬಿಜೆಪಿ ಮತ್ತು ಕಾಂಗ್ರೆಸ್‌ನ ಘಟಾನುಘಟಿ ಅಭ್ಯರ್ಥಿಗಳ ಹಣೆಬರಹವು ಹೊರ ಬೀಳಲಿದೆ. ಮಧ್ಯಾಹ್ನ 1 ಗಂಟೆ ವೇಳೆಗೆ ಸಂಪೂರ್ಣ ಫಲಿತಾಂಶ ಹೊರಬೀಳುವ ಸಾಧ್ಯತೆ ಹೆಚ್ಚಾಗಿ ಕಂಡು ಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com