ಸುನಂದಾ ಪ್ರಕರಣ: ಮತ್ತೆ ಶಶಿ ತರೂರ್ ವಿಚಾರಣೆ

ಸುನಂದಾ ಪುಷ್ಕರ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿರುವ ದೆಹಲಿಯ ಎಸ್‌ಐಟಿ...
ಮಾಜಿ ಕೇಂದ್ರ ಸಚಿವ ಶಶಿ ತರೂರ್ ಮತ್ತು ಸುನಂದಾ ಪುಷ್ಕರ್
ಮಾಜಿ ಕೇಂದ್ರ ಸಚಿವ ಶಶಿ ತರೂರ್ ಮತ್ತು ಸುನಂದಾ ಪುಷ್ಕರ್
Updated on: 

ನವದೆಹಲಿ: ಸುನಂದಾ ಪುಷ್ಕರ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿರುವ ದೆಹಲಿಯ ಎಸ್‌ಐಟಿ ಪೊಲೀಸರು ಮಾಜಿ ಕೇಂದ್ರ ಸಚಿವ ಹಾಗೂ ಸುನಂದಾ ಪುಷ್ಕರ್ ಅವರ ಪತಿ ಶಶಿ ತರೂರ್ ಅವರನ್ನು ಗುರುವಾರ ಮತ್ತೆ ವಿಚಾರಣೆಗೊಳಪಡಿಸಿದೆ.

ಸುನಂದಾ ಅವರ ನಿಗೂಡ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಪೊಲೀಸರು ಶಶಿ ತರೂರ್ ಅವರನ್ನು ಜ.19ರಂದು ವಿಚಾರಣೆಗೊಳಪಡಿಸಿತ್ತು. ಕೆಲವು ದಿನಗಳ ಹಿಂದಷ್ಟೇ ಸುನಂದಾ ಅವರ ಮೊದಲ ಪತಿ ಶಿವ್ ಮೆನನ್ ಅವರನ್ನು ವಿಶೇಷ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದರು.

ಸುನಂದಾಗೆ ಅವರನ್ನು ತಿಳಿದ ಎಲ್ಲರನ್ನು ವಿಚಾರಣೆಗೊಳಪಡಿಸಲಾಗುತ್ತಿದೆ. ಹಾಗಾಗಿ ಸುನಂದಾ ಅವರ ಮೊದಲ ಪತಿ ಶಿವ್ ಮೆನನ್ ಅವರನ್ನು ವಿಚಾರಣೆಗೊಳಪಡಿಸಲಾಗಿತ್ತು. ವಿಚಾರಣೆ ಶಿವ್ ಮೆನನ್ ಅವರು ಕೆಲವು ಮಾಹಿತಿಗಳನ್ನು ನೀಡಿದ್ದಾರೆ. ಈ ಮಾಹಿತಿಗಳ ಕುರಿತ ಸ್ಪಷ್ಟನೆಗಾಗಿ ಶಶಿ ತರೂರ್ ಅವರನ್ನು ಮತ್ತೆ ವಿಚಾರಣೆಗೊಳಪಡಿಸುವ ಅಗತ್ಯವಿದೆ ಎಂದು ದೆಹಲಿ ಪೊಲೀಸ್ ಆಯುಕ್ತ ಬಿ.ಎಸ್ ಬಸ್ಸಿ ಹೇಳಿದ್ದಾರೆ.

ಮಾಜಿ ಕೇಂದ್ರ ಸಚಿವ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ಅವರು ದೆಹಲಿಯ ಚಾಣಕ್ಯಪುರಿಯ ಲೀಲಾ ಪ್ಯಾಲೆಸ್ ಪಂಚತಾರಾ ಹೋಟೆಲ್‌ನ ರೂಮ್ ನಂ.345ರಲ್ಲಿ ಜನವರಿ 17ರ ರಾತ್ರಿ ನಿಗೂಢವಾಗಿ ಸಾವನ್ನಪ್ಪಿದ್ದರು. ಈ ಪ್ರಕರಣ ಹಲವು ತಿರುವುಗಳನ್ನು ಪಡೆದುಕೊಂಡಿದ್ದು, ಪ್ರಕರಣ ಕುರಿತ ಸ್ಪಷ್ಟ ಮಾಹಿತಿಗಳು ಈವರೆಗೂ ಲಭ್ಯವಾಗಿಲ್ಲ. ವಿಚಾರಣೆ ನಡೆಸುತ್ತಿರುವ ವಿಶೇಷ ತಂಡದ ಅಧಿಕಾರಿಗಳು ಈವರೆಗೂ ಸುನಂದಾ ಅವರ ಗೆಳೆಯರು, ಸಂಬಂಧಿಕರು ಸೇರಿದಂತೆ 15 ಮಂದಿಯನ್ನು ವಿಚಾರಣೆಗೊಳಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com