ಭಾರತ-ಪಾಕ್ ಸಂಬಂಧ ಸುಧಾರಣೆಗೆ ಹೊಸ ಹೆಜ್ಜೆ

ಹಳಸಿದ್ದ ಭಾರತ-ಪಾಕ್ ಸಂಬಂಧ ಮತ್ತೆ ಸುಧಾರಿಸಲಿದೆಯೇ? ಕಳೆದ ವರ್ಷ ಎರಡೂ ರಾಷ್ಟ್ರಗಳ...
ಭಾರತ-ಪಾಕ್ ಸಂಬಂಧ ಸುಧಾರಣೆಗೆ ಹೊಸ ಹೆಜ್ಜೆ

ನವದೆಹಲಿ: ಹಳಸಿದ್ದ ಭಾರತ-ಪಾಕ್ ಸಂಬಂಧ ಮತ್ತೆ ಸುಧಾರಿಸಲಿದೆಯೇ? ಕಳೆದ ವರ್ಷ ಎರಡೂ ರಾಷ್ಟ್ರಗಳ ವಿದೇಶಾಂಗ ಕಾರ್ಯದರ್ಶಿ ಮಟ್ಟದ ಸಭೆ ರದ್ದಾದ ಬಳಿಕ ಭಾರತ ಮತ್ತು ಪಾಕ್ ದ್ವಿಪಕ್ಷೀಯ ಸಂಬಂಧ ಸುಧಾರಿಸುವ ನಿಟ್ಟಿನಲ್ಲಿ ಯಾವುದೇ ಪ್ರಯತ್ನ ನಡೆದಿರಲಿಲ್ಲ. ಆದರೆ ಈಗ ದಕ್ಷಿಣ ಏಷ್ಯಾ ರಾಷ್ಟ್ರಗಳೊಂದಿಗೆ ಉತ್ತಮ ಸಂಬಂಧ ಕಾಪಾಡಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮುಂದಾಗಿದ್ದು, ಸದ್ಯದಲ್ಲೇ ವಿದೇಶಾಂಗ ಕಾರ್ಯದರ್ಶಿ ಎಸ್. ಜೈಶಂಕರ್ ಅವರು ಪಾಕ್‍ಗೆ ಭೇಟಿ ನೀಡಲಿದ್ದಾರೆ.

ನಂತರ ಇತರೆ ಸಾರ್ಕ್ ದೇಶಗಳಿಗೂ ಅವರು ಪ್ರಯಾಣ ಬೆಳೆಸಲಿದ್ದಾರೆ. ಪಾಕಿಸ್ತಾನದೊಂದಿಗೆ ವಿದೇಶಾಂಗ ಕಾರ್ಯದರ್ಶಿ ಮಟ್ಟದ ಮಾತುಕತೆ ನಡೆಸಲು ನಿರ್ಧರಿಸಿರುವ ಬಗ್ಗೆ ಸ್ವತಃ ಪ್ರಧಾನಿ ಮೋದಿ ಅವರೇ ಪಾಕ್ ಪ್ರಧಾನಿ ನವಾಜ್ ಷರೀಫ್ ಗೆ ಕರೆ ಮಾಡಿ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಷ್ಟೇ ಅಲ್ಲ, ಈ ವೇಳೆ ಪ್ರಧಾನಿ ಅವರು ಪಾಕಿಸ್ತಾನ ಕ್ರಿಕೆಟ್ ತಂಡಕ್ಕೂ ಶುಭ ಕೋರಿದ್ದಾರೆ ಎಂದೂ ಹೇಳಲಾಗಿದೆ. ಇದೇ ವೇಳೆ, ಪಾಕಿಸ್ತಾನ ಹೈಕಮಿಷನರ್ ಬಾಸಿತ್ ಅವರು ಜೈಶಂಕರ್‍ರೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com