

ಲಾಹೋರ್: ಭಾರತ-ಪಾಕಿಸ್ತಾನ ಸಂಬಂಧ ಸುಧಾರಣೆಗೆ ಭಾರತ ಸರ್ಕಾರ ಮುಂದಾಗಿರುವುದಕ್ಕೆ ಪಾಕಿಸ್ತಾನ ಹರ್ಷ ವ್ಯಕ್ತಪಡಿಸಿದೆ.
ಭಾರತದ ವಿದೇಶಾಂಗ ಕಾರ್ಯದರ್ಶಿ ಪಾಕಿಸ್ತಾನಕ್ಕೆ ಭೇಟಿ ನೀಡುತ್ತಿರುವುದನ್ನು ಸ್ವಾಗತಿಸಿರುವ ಪಾಕ್ ಪ್ರಧಾನಿ ನವಾಜ್ ಷರೀಫ್, ಅವರೊಂದಿಗೆ ಕಾಶ್ಮೀರ ಸೇರಿದಂತೆ ಎಲ್ಲ ವಿಚಾರಗಳ ಬಗ್ಗೆ ಮಾತುಕತೆ ನಡೆಸುವುದಾಗಿ ಹೇಳಿದ್ದಾರೆ.
ಪಾಕಿಸ್ತಾನವು ತನ್ನ ನೆರೆರಾಷ್ಟ್ರಗಳೊಂದಿಗೆ ಶಾಂತಿಯುತ ಸಂಬಂಧ ಹೊಂದಲು ಇಚ್ಛಿಸುತ್ತದೆ. ಹಾಗಾಗಿ ಭಾರತದ ವಿದೇಶಾಂಗ ಕಾರ್ಯದರ್ಶಿ ಜೈ ಶಂಕರ್ ಅವರ ಆಗಮನವನ್ನು ಸ್ವಾಗತಿಸುತ್ತೇವೆ ಎಂದಿದ್ದಾರೆ.