
ಪಣಜಿ: ಕಳೆದ ಫೆಬ್ರವರಿ 13ರಂದು ನಡೆದಿದ್ದ ಪಣಜಿ ವಿಧಾನಸಭಾ ಕ್ಷೇತದ ಉಪ ಚುನಾವಣೆಯ ಫಲಿತಾಂಶ ಸೋಮವಾರ ಹೊರಬಿದ್ದಿದ್ದು, ಆಡಳಿತರೂಢ ಬಿಜೆಪಿ ಭರ್ಜರಿ ಜಯ ಸಾಧಿಸುವ ಮೂಲಕ, 1994ರಿಂದ ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಹೊಂದಿದ್ದ ಕ್ಷೇತ್ರವನ್ನು ಸತತ 6ನೇ ಬಾರಿಯೂ ತನ್ನದಾಗಿಸಿಕೊಳ್ಳುವಲ್ಲಿ ಬಿಜೆಪಿ ಯಶಸ್ವಿಯಾಗಿದೆ.
ಬಿಜೆಪಿ ಅಭ್ಯರ್ಥಿ ಸಿದ್ಧಾರ್ಥ ಕುಂಕೊಲಿಂಕರ್ ಅವರು ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಸುರೇಂದ್ರ ಪರ್ತಡೊ ಅವರ ವಿರುದ್ಧ 5, 368 ಮಂತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಫಲಿತಾಂಶದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ಧಾರ್ಥ ಅವರು, 'ಜನರು ನನ್ನ ಮೇಲೆ ವಿಶ್ವಾವಿಟ್ಟು ಗೆಲ್ಲಿಸಿದ್ದಾರೆ. ಈಗ ಅವರ ಆಕಾಂಕ್ಷೆಗಳನ್ನು ಈಡೇರಿಸುವುದು ನನ್ನ ಜವಾಬ್ದಾರಿಯಾಗಿದೆ' ಎಂದು ಹೇಳಿದ್ದಾರೆ.
ಕಳೆದ ನವೆಂಬರ್‌ನಲ್ಲಿ ಗೋವಾ ಮಾಜಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ ನಂತರ ತೆರವಾಗಿದ್ದ ಪಣಜಿ ವಿಧಾನಸಭಾ ಕ್ಷೇತ್ರಕ್ಕೆ ಫೆಬ್ರವರಿ 13ರಂದು ಮತದಾನ ನಡೆದಿತ್ತು. ಪರಿಕ್ಕರ್ ಅವರು 1994ರಿಂದ ಸತತ ಐದು ಈ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು.
Advertisement