ಮಹಾರಾಷ್ಟ್ರ ಮಾಜಿ ಡಿಸಿಎಂ ಆರ್.ಆರ್ ಪಾಟೀಲ್ ನಿಧನ

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಮಹಾರಾಷ್ಟ್ರ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಎನ್‌ಸಿಪಿ ಹಿರಿಯ ನಾಯಕ ಆರ್.ಆರ್.ಪಾಟೀಲ್ ಅವರು ಸೋಮವಾರ ನಿಧನರಾಗಿದ್ದಾರೆ.
ಆರ್.ಆರ್ ಪಾಟೀಲ್
ಆರ್.ಆರ್ ಪಾಟೀಲ್
Updated on: 

ಮುಂಬೈ: ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಮಹಾರಾಷ್ಟ್ರ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಎನ್‌ಸಿಪಿ ಹಿರಿಯ ನಾಯಕ ಆರ್.ಆರ್.ಪಾಟೀಲ್ ಅವರು ಸೋಮವಾರ ನಿಧನರಾಗಿದ್ದಾರೆ.

ಕ್ಯಾನ್ಸರ್ ಹಾಗೂ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಪಾಟೀಲ್ ಅವರು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ.

1957 ಆಗಸ್ಟ್ 16ರಂದು ಮಹಾರಾಷ್ಟ್ರದ ಸಾಂಗ್ಲಿಯ ಅಂಜಾನಿ ಗ್ರಾಮದಲ್ಲಿ ಜನಿಸಿದ ಆರ್.ಆರ್.ಪಾಟೀಲ್ ಅವರು ಜಿಲ್ಲಾ ಪಂಚಾಯತ್ ಸದಸ್ಯರಾಗುವ ಮೂಲಕ ತಮ್ಮ ರಾಜಕೀಯ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ ತಾಸಗಾಂವ್ ವಿಧಾನಸಭಾ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಪಾಟೀಲ್, 2004ರಿಂದ 2008ರವರೆಗೆ ಉಪ ಮುಖ್ಯಮಂತ್ರಿಯಾಗಿ ಹಾಗೂ 2009ರಿಂದ 2014ರವೆಗೆ ಪೃಥ್ವಿರಾಜ್ ಚೌವ್ಹಾಣ್ ಅವರ ಸರ್ಕಾರದಲ್ಲಿ ಗೃಹಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com