ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸಿದ ಶ್ರೀಲಂಕಾ ಅಧ್ಯಕ್ಷ

ಶ್ರೀಲಂಕಾ ಅಧ್ಯಕ್ಷರಾಗಿ ಮೊದಲ ಬಾರಿಗೆ ಪ್ರವಾಸ ಕೈಗೊಂಡಿರುವ ಮೈತ್ರಿಪಾಲ ಸಿರಿಸೇನಾ ಅವರು...
ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ
ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ

ನವದೆಹಲಿ: ಶ್ರೀಲಂಕಾ ಅಧ್ಯಕ್ಷರಾಗಿ ಮೊದಲ ಬಾರಿಗೆ ಭಾರತ ಪ್ರವಾಸ ಕೈಗೊಂಡಿರುವ ಮೈತ್ರಿಪಾಲ ಸಿರಿಸೇನಾ ಅವರು ರಾಜ್‌ಘಾಟ್‌ನಲ್ಲಿರುವ ಮಹಾತ್ಮ ಗಾಂಧಿ ಅವರ ಸಮಾಧಿಗೆ ಪುಷ್ಪ ಗುಚ್ಚ ಇರಿಸುವ ಮೂಲಕ ಸೋಮವಾರ ಗೌರವ ಪೂರಕ ನಮನವನ್ನು ಸಲ್ಲಿಸಿದ್ದಾರೆ.

ಗಾಂಧೀಜಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ನಂತರ ಸಿರಿಸೇನಾ ನೇರವಾಗಿ ರಾಷ್ಟ್ರಪತಿ ಭವನ ತಲುಪಲಿದ್ದು, ಅಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರೊಂದಿಗೆ ಹಣಕಾಸು, ಶಾಂತಿ ಹಾಗೂ ಅಭಿವೃದ್ಧಿ ಯೋಜನೆಗಳ ಕುರಿತು ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.

ಇಂದು ಸಂಜೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಸಿರಿಸೇನಾ ಅವರು ಭೇಟಿ ಮಾಡಲಿದ್ದು, ಫೆಬ್ರವರಿ 17 ರಂದು ಬುಧ್‌ಗಯಾ ಮತ್ತು ತಿರುಪತಿ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ಫೆಬ್ರವರಿ 18ರಂದು ವಾಪಸ್ಸು ಶ್ರೀಲಂಕಾಗೆ ತೆರಳಲಿದ್ದಾರೆ ಎಂದು ತಿಳಿದು ಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com