ಪಾಕ್‌ನಲ್ಲಿ ಆತ್ಮಾಹುತಿ ಬಾಂಬ್ ದಾಳಿ: 9 ಮಂದಿ ದುರ್ಮರಣ

ಪಾಕಿಸ್ತಾನ ಪೊಲೀಸರನ್ನು ಗುರಿಯಾಗಿರಿಸಿಕೊಂಡು ಉಗ್ರರು ನಡೆಸಿದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ.
ಆತ್ಮಾಹುತಿ ಬಾಂಬ್ ದಾಳಿ(ಸಾಂದರ್ಭಿಕ ಚಿತ್ರ)
ಆತ್ಮಾಹುತಿ ಬಾಂಬ್ ದಾಳಿ(ಸಾಂದರ್ಭಿಕ ಚಿತ್ರ)
Updated on

ಲಾಹೋರ್: ಪಾಕಿಸ್ತಾನ ಪೊಲೀಸರನ್ನು ಗುರಿಯಾಗಿರಿಸಿಕೊಂಡು ಉಗ್ರರು ನಡೆಸಿದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ.

ಪಾಕಿಸ್ತಾನದ ಲಾಹೋರ್ ನ ಪೊಲೀಸ್ ಲೇನ್ ಬಳಿಯ ಹೊಟೇಲ್ ವೊಂದರ ಹೊರಗಡೆ ವ್ಯಕ್ತಿಯೊಬ್ಬ ಬಾಂಬ್ ಸ್ಫೋಟಿಸಿಕೊಂಡಿದ್ದಾನೆ. ಸ್ಫೋಟದಲ್ಲಿ ಒಂಬತ್ತು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ ಅವನ್ನು ಸ್ಥಳೀಯ ಮಾಯೊ ಮತ್ತು ಶ್ರೀಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಾಳುಗಳಲ್ಲಿ ಹಲವ ಪರಿಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಗಳಿವೆ.

ಸ್ಫೋಟದ ತೀವ್ರತೆಗೆ ಕಟ್ಟದ ಕಿಟಕಿ ಗಾಜುಗಳು ನುಚ್ಚುನೂರಾಗಿವೆ. ಅಲ್ಲದೆ ಪಕ್ಕದಲ್ಲಿ ನಿಲ್ಲಿಸಿದ್ದ ಕಾರುಗಳಿಗೆ ಬೆಂಕಿ ಹೊತ್ತಿಕೊಂಡಿವೆ.

ಘಟನಾ ಸ್ಥಳಕ್ಕೆ ಭದ್ರತಾ ಅಧಿಕಾರಿಗಳು ಹಾಗೂ ರಕ್ಷಣಾ ಸಿಬ್ಬಂದಿ ದೌಡಾಯಿಸಿದ್ದು, ಗಾಯಾಳುಗಳ ರಕ್ಷಣೆಯಲ್ಲಿ ತೊಡಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com