ನೈಜೇರಿಯಾ ಮಹಿಳೆ ಮೇಲೆ ಗ್ಯಾಂಗ್‌ರೇಪ್: ನಾಲ್ವರ ಬಂಧನ

ಅತ್ಯಾಚಾರ
ಅತ್ಯಾಚಾರ

ನವದೆಹಲಿ: ನೈಜೇರಿಯಾ ಮೂಲದ 35 ವರ್ಷದ ಮಹಿಳೆಯನ್ನು ಅಪಹರಿಸಿ ಚಲಿಸುತ್ತಿರುವ ಕಾರಿನಲ್ಲಿಯೇ ನಾಲ್ಕು ಮಂದಿ ಆರೋಪಿಗಳು ಸಾಮೂಹಿಕ ಅತ್ಯಾಚಾರವೆಸಗಿರುವ ದಾರುಣ ಘಟನೆ ದೆಹಲಿಯ ಮಯೂರ್ ವಿಹಾರ್ನಲ್ಲಿ ನಡೆದಿದೆ.

ಶುಕ್ರವಾರ ಬೆಳಗ್ಗೆ 2.30ರ ಸುಮಾರಿನಲ್ಲಿ ಮಹಿಳೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದು, ಆಕೆಗೆ ಮದ್ಯಪಾನ ಮಾಡಿಸಲಾಗಿತ್ತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮಯೂರ್ ವಿಹಾರ್ ಪ್ರದೇಶದಲ್ಲಿ ಮಹಿಳೆ ತೆರಳುತ್ತಿದ್ದಾಗ ಕಾರಿನಲ್ಲಿ ಬಂದ ನಾಲ್ಕು ಮಂದಿ ಅಪರಿಚಿತರು ಒತ್ತಾಯಪೂರ್ವಕವಾಗಿ ಆಕೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪೊಲೀಸರು, ಗ್ಯಾಂಗ್‌ರೇಪ್ ಎಸಗಿದ ನಾಲ್ವರು ಆರೋಪಿಗಳು ಸೇರಿದಂತೆ ಅತ್ಯಾಚಾರಕ್ಕೆ ಬಳಸಲಾದ ಅಸೆಂಟಾ ಕಾರು ಕೂಡಾ ವಶಕ್ಕೆ ತೆಗೆದುಕೊಂಡಿದ್ದಾರೆ.

ಆರೋಪಿಗಳು ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ನಂತರ ದೆಹಲಿ-ನೋಯಿಡಾ ಫ್ಲೈಓವರ್ ಬಳಿ ಆಕೆಯನ್ನು ಎಸೆದು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com