ಫೆ. 22ಕ್ಕೆ ಮತ್ತೆ ಸಿಎಂ ಆಗಿ ನಿತೀಶ್ ಪ್ರಮಾಣವಚನ

ಬಿಹಾರ ರಾಜ್ಯ ರಾಜಕಾರಣದ ಹೈಡ್ರಾಮ ಅಂತ್ಯಗೊಂಡಿದ್ದು, ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತೆ ಸಿಎಂ ಆಗಿ ಫೆಬ್ರವರಿ 22 ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ನಿತೀಶ್ ಕುಮಾರ್
ನಿತೀಶ್ ಕುಮಾರ್

ಪಾಟ್ನಾ: ಬಿಹಾರ ರಾಜ್ಯ ರಾಜಕಾರಣದ ಹೈಡ್ರಾಮ ಅಂತ್ಯಗೊಂಡಿದ್ದು, ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತೆ ಸಿಎಂ ಆಗಿ ಫೆಬ್ರವರಿ 22 ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ರಾಜ್ಯಪಾರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಿತೀಶ್ ಕುಮಾರ್, ಸರ್ಕಾರ ರಚನೆಗೆ ರಾಜ್ಯಪಾಲರು ಆಹ್ವಾನ ನೀಡಿದ್ದು, ತಾವು ಫೆ. 22ರಂದು ಪ್ರಮಾಣವಚನ ಸ್ವೀಕರಿಸುವುದಾಗಿ ಹೇಳಿದ್ದಾರೆ. ಅಲ್ಲದೆ ಬಹುಮತ ಸಾಭೀತು ಪಡಿಸಲು ರಾಜ್ಯಪಾಲರು 3 ವಾರಗಳ ಕಾಲಾವಕಾಶ ನೀಡಿದ್ದು, ಮಾರ್ಚ್ 16ರೊಳಗೆ ಬಹುಮತ ಸಾಭೀತಿಗೆ ಕೊನೆಯ ದಿನವಾಗಿದೆ ಎಂದರು.

ಸರ್ಕಾರ ರಚನೆಗೆ ಆರ್ ಜೆಡಿ, ಕಾಂಗ್ರೆಸ್ ಮತ್ತು ಸಿಪಿಐ ಪಕ್ಷಗಳು ಬೆಂಬಲ ನೀಡುತ್ತಿವೆ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.

ನಿತೀಶ್ ಕುಮಾರ್ ಅವರು 4ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಲಿದ್ದು, ಫೆ. 22 ಭಾನುವಾರ ಸಂಜೆ 5 ಗಂಟೆಗೆ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ನಿತೀಶ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.

ಬಹುಮತ ಸಾಬೀತಿಗೂ ಮುನ್ನವೇ ಬಿಹಾರ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಅವರು ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಈ ಮೂಲಕ 14 ದಿನಗಳ ಬಿಹಾರ ರಾಜಕೀಯ ಬಿಕ್ಕಟ್ಟಿಗೆ ತೆರೆ ಬಿದ್ದಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com