ನಕ್ಸಲ್ ದಾಳಿ: 2 ಅಧಿಕಾರಿಗಳಿಗೆ ಗಾಯ

ಛತ್ತೀಸ್‌ಗಡದ ಬಿಜಾಪುರದ ಬಳಿ ನಕ್ಸಲರು ನೆಲಬಾಂಬ್ ಸ್ಫೋಟಿಸಿದ ಪರಿಣಾಮ 2 ಪೊಲೀಸರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ...
ಸಾಂದರ್ಬಿಕ ಚಿತ್ರ
ಸಾಂದರ್ಬಿಕ ಚಿತ್ರ
Updated on

ರಾಯಪುರ: ಛತ್ತೀಸ್‌ಗಡದ ಬಿಜಾಪುರದ ಬಳಿ ನಕ್ಸಲರು ನೆಲಬಾಂಬ್ ಸ್ಫೋಟಿಸಿದ ಪರಿಣಾಮ 2 ಪೊಲೀಸರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ.

ನಕ್ಸಲ್ ಪೀಡಿತ ಪ್ರದೇಶ ಬಿಜಾಪುರದ ಬಳಿ ನಕ್ಸಲರಿಗಾಗಿ ಸ್ಥಳೀಯ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ನಕ್ಸಲರು ನೆಲ ಬಾಂಬ್ ಸ್ಫೋಟಿಸಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಮುಖ್ಯ ಪೇದೆ ರಾಜೇಶ್ ಹಾಗೂ ಸಹಾಯಕ ಪೇದೆ ಅಶ್ರಮ್ ನೇತಮ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಭದ್ರತಾ ಸಿಬ್ಬಂದಿಗಳು ಗಾಯಗೊಂಡ ಪೊಲೀಸರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com