

ಜಮ್ಮು: ಪಿಡಿಪಿ ಮತ್ತು ಬಿಜೆಪಿ ಮೈತ್ರಿ ಮಾತುಕತೆ ಬಹುತೇಕ ಅಂತಿಮವಾಗಿದ್ದು, ಶೀಘ್ರದಲ್ಲೇ ಪಿಡಿಪಿ ಮುಖ್ಯಸ್ಥೆ ಮುಫ್ತಿ ಮೊಹ್ಮದ್ ಸಯೀದ್ ಅವರು ಜಮ್ಮು ಮತ್ತು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಸರ್ಕಾರ ರಚನೆಗೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಪಿಡಿಪಿ ನಡುವಿನ ಮೈತ್ರಿ ಮಾತುಕತೆ ಯಶಸ್ವಿಯಾಗಿದ್ದು, ಎಲ್ಲಾ ಗೊಂದಲಗಳಿಗೂ ಪರಿಹಾರ ಕಂಡುಕೊಳ್ಳಲಾಗಿದೆ ಎಂದು ಮುಫ್ತಿ ಮೊಹ್ಮದ್ ಸಯೀದ್ ಹೇಳಿರುವುದಾಗಿ ಪಿಡಿಪಿಯ ಆಪ್ತ ಮೂಲಗಳು ಸುದ್ದಿಸಂಸ್ಥೆಗಳು ತಿಳಿಸಿವೆ.
ಕಲಂ 370, ಸೇನಾ ಪಡೆಯ ವಿಶೇಷ ಅಧಿಕಾರಿ ಸೇರಿದಂತೆ ಪ್ರಮುಖ ಒಪ್ಪಂದಗಳಿಗೆ ಅಲಿಖಿತ ಒಪ್ಪಿಗೆ ಸೂಚಿಸಲಾಗಿದೆ. ಒಪ್ಪಂದದ ಪ್ರಕಾರ, ಸಂಪೂರ್ಣ 6 ವರ್ಷಗಳ ಕಾಲ ಮುಫ್ತಿ ಮಹಮ್ಮದ್ ಸಯೀದ್ ಅವರೇ ಜಮ್ಮು ಮತ್ತು ಕಾಶ್ನೀರದ ಮುಖ್ಯಮಂತ್ರಿಯಾಗಿರುತ್ತಾರೆ.
ಉಪ ಮುಖ್ಯಮಂತ್ರಿ ಸ್ಥಾನ ಬಿಜೆಪಿ ಪಾಲಾಗಲಿದ್ದು, ಸಚಿವ ಸ್ಥಾನಗಳನ್ನು ರಾಜ್ಯದ ಮೂರು ಭಾಗಗಳ ಸಮಾನ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಹಂಚಿಕೊಳ್ಳಲು ನಿರ್ಧರಿಸಲಾಗಿದೆ.