ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್: ಓರ್ವ ಉಗ್ರ ಸಾವು

ಭದ್ರತಾ ಮತ್ತು ಉಗ್ರರ ನಡುವೆ ಶನಿವಾರ ಉಂಟಾದ ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರನನ್ನು ಭದ್ರತಾ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಜಮ್ಮು-ಕಾಶ್ಮೀರ: ಭದ್ರತಾ ಮತ್ತು ಉಗ್ರರ ನಡುವೆ ಶನಿವಾರ ಉಂಟಾದ ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರನನ್ನು ಭದ್ರತಾ ಎನ್‌ಕೌಂಟರ್ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕಾಶ್ಮೀರದ ಸೋಪೋರ್‌ನಲ್ಲಿ ಭದ್ರತಾ ಪಡೆಯ ಮೇಲೆ ಭಯೋತ್ಪಾದಕರು ದಾಳಿ ಮಾಡಿದ್ದಾರೆ. ಇದಕ್ಕೆ ಪ್ರತ್ಯುತ್ತರ ನೀಡಿದ ಭದ್ರತಾ ಪಡೆ ಭಯೋತ್ಪಾದಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಭದ್ರತಾ ಪಡೆ ಓರ್ವ ಭಯೋತ್ಪಾದಕನನ್ನೂ ಎನ್‌ಕೌಂಟರ್ ಮಾಡಿದ್ದಾರೆ.

ಸೋಪೋರ್ ಪ್ರದೇಶದ ಸುತ್ತಮುತ್ತಾ ಉಗ್ರರು ಅಡಗಿರುವ ಸಾಧ್ಯತೆಯಿದ್ದು, ಭದ್ರತಾ ಸಿಬ್ಬಂದಿ ಪರಿಶೀಲನೆ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com