ಹೋರಾಟಕ್ಕೆ ಬರಬಹುದು: ಬೇಡಿ, ಕೇಜ್ರಿವಾಲ್‌ಗೆ ಅಣ್ಣಾ ಆಹ್ವಾನ

ಭೂಸ್ವಾಧೀನ ಪ್ರಕ್ರಿಯೆ ಕುರಿತಂತೆ ಇತ್ತೀಚೆಗೆ ಕೇಂದ್ರ ಸರ್ಕಾರ ಹೊರಡಿಸಿದ್ದ ಸುಗ್ರೀವಾಜ್ಞೆಯನ್ನು ವಿರೋಧಿಸಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಅಣ್ಣಾ ಹಜಾರೆ...
ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ (ಸಂಗ್ರಹ ಚಿತ್ರ)
ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ (ಸಂಗ್ರಹ ಚಿತ್ರ)

ನವದೆಹಲಿ: ಭೂಸ್ವಾಧೀನ ಪ್ರಕ್ರಿಯೆ ಕುರಿತಂತೆ ಇತ್ತೀಚೆಗೆ ಕೇಂದ್ರ ಸರ್ಕಾರ ಹೊರಡಿಸಿದ್ದ ಸುಗ್ರೀವಾಜ್ಞೆಯನ್ನು ವಿರೋಧಿಸಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಅಣ್ಣಾ ಹಜಾರೆ ಸತ್ಯಾಗ್ರಹ ಹೋರಾಟ ಹಮ್ಮಿಕೊಂಡಿದ್ದು, ಹೋರಾಟಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಬಿಜೆಪಿ ದೆಹಲಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದ ಕಿರಣ್ ಬೇಡಿ ಅವರನ್ನು ಆಹ್ವಾನಿಸಲು ಮುಂದಾಗಿದ್ದಾರೆ.

ಈ ಬಗ್ಗೆ ಸ್ವತಃ ಅಣ್ಣಾ ಹಜಾರೆ ಅವರೇ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಇದೇ ಫೆಬ್ರವರಿ 23ರಂದು ನಾನು ಅರವಿಂದ್ ಕೇಜ್ರಿವಾಲ್ ರನ್ನು ಭೇಟಿ ಮಾಡಲಿದ್ದೇನೆ ಮತ್ತು ನನ್ನ ಹೊರಾಟಕ್ಕೆ ಆಹ್ವಾನಿಸುತ್ತೇನೆ. ಪ್ರಸ್ತುತ ಅವರು ದೆಹಲಿ ಮುಖ್ಯಮಂತ್ರಿಯಾಗಿದ್ದಾರೆ. ಹೀಗಾಗಿ ನಾವು ಒಂದೇ ವೇದಿಕೆಯನ್ನು ಹಂಚಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

'ನಾನು ಕೇಜ್ರಿವಾಲ್ ರನ್ನು ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನಿಸುತ್ತೇನೆ. ಕೇಜ್ರಿವಾಲ್ ಅಷ್ಟೇ ಅಲ್ಲ, ಬೇಕೆಂದರೆ ಯಾವುದೇ ಮುಖ್ಯಮಂತ್ರಿಗಳು ಬೇಕಾದರೂ ಹೋರಾಟದಲ್ಲಿ ಪಾಲ್ಗೊಳ್ಳಬಹುದು. ಕಾಂಗ್ರೆಸ್ ಪಕ್ಷದ ರಾಹುಲ್ ಗಾಂಧಿ ಕೂಡ ಹೋರಾಟಕ್ಕೆ ಬರಬೇಕು ಎಂದೆನಿಸಿದರೆ ಅವರು ಕೂಡ ಬರಬಹುದು. ಆದರೆ ಅವರು ದೇಶದ ಸಾಮಾನ್ಯ ಪ್ರಜೆಯಾಗಿ ಬಂದರೆ ಮಾತ್ರ ಅವರಿಗೆ ಆಹ್ವಾನ' ಎಂದು ಅಣ್ಣಾ ಹೇಳಿದ್ದಾರೆ.

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಿಡಿಕಾರಿರುವ ಅಣ್ಣಾ, ದೆಹಲಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ನರೇಂದ್ರ ಮೋದಿ ಅವರು ಕೇಜ್ರಿವಾಲ್ ಅವರ ವಿರುದ್ಧ ಬಳಸಿದ ಕೆಲ ಪದ ಪ್ರಯೋಗಗಳು ಸರಿಯಿಲ್ಲ ಎಂದು ಅಭಿಪ್ರಾಯ ಪಟ್ಟಿದ್ದಾರೆ. ಅಲ್ಲದೇ ತಾವು ಕಿರಣ್ ಬೇಡಿ ಅವರೊಂದಿಗೆ ಮಾತನಾಡುತ್ತಿಲ್ಲ ಎಂಬ ಮಾಧ್ಯಮಗಳ ವರದಿಯನ್ನು ತಳ್ಳಿ ಹಾಕಿದ ಅಣ್ಣಾ ಹಜಾರೆ, ಬಾಬಾ ರಾಮ್ ದೇವ್ ಅವರು ತಮ್ಮೊಂದಿಗೆ ಸಂಪರ್ಕದಲ್ಲಿ ಇಲ್ಲ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com