ಮಮತಾ ಬ್ಯಾನರ್ಜಿ ಆಪ್ತ ಶಿಬಾಜಿ ಪಾಂಜಾ ಬಂಧನ

ಹಣಕಾಸು ಆರೋಪದಡಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಪ್ತ ಶಿಬಾಜಿ ಪಾಂಜಾನನ್ನು ಶನಿವಾರ ರಾತ್ರಿ ಕೊಲ್ಕತಾ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ...
ಶಿಬಾಜಿ ಪಾಂಜಾ (ಸಂಗ್ರಹ ಚಿತ್ರ)
ಶಿಬಾಜಿ ಪಾಂಜಾ (ಸಂಗ್ರಹ ಚಿತ್ರ)
Updated on: 

ನವದೆಹಲಿ: ಹಣಕಾಸು ಅವ್ಯವಹಾರ ಆರೋಪದಡಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಪ್ತ ಶಿಬಾಜಿ ಪಾಂಜಾನನ್ನು ಶನಿವಾರ ರಾತ್ರಿ ಕೊಲ್ಕತಾ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

ಮಮತಾ ನಿಯೋಗದಲ್ಲಿದ್ದ ಶಿಬಾಜಿ ಪಾಂಜಾ ಮಮತಾ ಜೊತೆ ಬಾಂಗ್ಲಾದೇಶಕ್ಕೆ ತೆರಳಿದ್ದರು. ನಿನ್ನೆ ರಾತ್ರಿ ಕೊಲ್ಕತ್ತಾ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ ವಲಸೆ ಇಲಾಖೆಯ ಅಧಿಕಾರಿಗಳು ಪಾಂಜಾ ಅವರನ್ನು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದೆಹಲಿ ಪೊಲೀಸರ ಸೂಚನೆ ಮೇರೆಗೆ ಪಾಂಜಾ ಅವರನ್ನು ಬಂಧಿಸಲಾಗಿದೆ. ಖಾಸಗಿ ಟಿವಿ ಚಾನೆಲ್‌ನ ನಿರ್ಮಾಪಕ ಮತ್ತು ಕೈಗಾರಿಕೋದ್ಯಮಿಯಾಗಿರುವ ಪಾಂಜಾ ಅವರನ್ನು ಸದ್ಯದಲ್ಲೇ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com