ಮಧ್ಯಪ್ರದೇಶ ರಾಜ್ಯಪಾಲರ ವಿರುದ್ಧ ಎಫ್‌ಐಆರ್

ದೇಶದಲ್ಲಿ ಇದೇ ಮೊದಲಬಾರಿಗೆ ಹಾಲಿ ರಾಜ್ಯಪಾಲರ ವಿರುದ್ಧ ಎಫ್‌ಐಆರ್ ದಾಖಲಾಗಿದೆ...
ರಾಮ್ ನರೇಶ್ ಯಾದವ್
ರಾಮ್ ನರೇಶ್ ಯಾದವ್

ಮಧ್ಯಪ್ರದೇಶ: ದೇಶದಲ್ಲಿ ಇದೇ ಮೊದಲಬಾರಿಗೆ ಹಾಲಿ ರಾಜ್ಯಪಾಲರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ವೃತ್ತಿಪರ ಪರೀಕ್ಷಾ ಮಂಡಳಿ ಹಗರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶದ ರಾಜ್ಯಪಾಲ ರಾಮ್ ನರೇಶ್ ಯಾದವ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ವೃತ್ತಿಪರ ಶಿಕ್ಷಣ ಮಂಡಳಿಯಲ್ಲಿನ ನೇಮಕಾತಿ ಹಗರಣ ನಡೆದಿದ್ದು, ಮಧ್ಯಪ್ರದೇಶ ಸ್ಪೆಷಲ್ ಟಾಸ್ಕ್ ಪೋರ್ಸ್ ಪ್ರಕರಣದ ತನಿಖೆ ನಡೆಸುತ್ತಿದೆ. ಹಗರಣದಲ್ಲಿ ರಾಜ್ಯಪಾಲ ರಾಮ್ ನರೇಶ್ ಯಾದವ್ ಹೆಸರು ಕೇಳಿ ಬಂದಿದ್ದು. ಭ್ರಷ್ಟಾಚಾರ ತಡೆ ಕಾಯ್ದೆಯಡಿ ಯಾದವ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಹಗರಣಧ ವಿವರಣೆ ನೀಡುವಂತೆ ರಾಜ್ಯಪಾಲರನ್ನು ಕೇಂದ್ರ ಗೃಹ ಸಚಿವಾಲಯ ಕೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com