
ನವದೆಹಲಿ: 'ಭೂ ಸ್ವಾಧೀನ ಕಾಯೆ ತಿದ್ದುಪಡಿ' ಸಂಬಂಧ ಸರ್ಕಾರ ಹೊರಡಿಸುವ ಸುಗ್ರೀವಾಜ್ಞೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಬಲವಾಗಿ ಸಮರ್ಥಿಸಿಕೊಂಡಿದ್ದು, ಸುಗ್ರೀವಾಜ್ಞೆಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ಮಂಗಳವಾರ ಸ್ಪಷ್ಟಪಡಿಸಿದ್ದಾರೆ.
ಭೂಸ್ವಾಧೀನಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಗೆ ಒಂದೆಡೆ ಪ್ರತಿಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾದರೆ, ಮತ್ತೊಂದೆಡೆ ಗಾಂಧಿವಾದಿ ಅಣ್ಣಾ ಹಜಾರೆ ಅವರೂ ಇದರ ವಿರುದ್ಧ ಧ್ವನಿಯೆತ್ತಿ, ಮತ್ತೆ ಜಂತರ್ ಮಂತರ್‍ಗೆ ಧಾವಿಸಿದ್ದಾರೆ. ಇವೆಲ್ಲವೂ ಮೋದಿ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದ್ದು, ಈ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ಮೋದಿ ಅವರು ಬಿಜೆಪಿ ಸಂಸದೀಯ ಮಂಡಳಿ ಸಭೆ ಕರೆದು ಚರ್ಚಿಸಿದರು.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮೋದಿ, ಭೂ ಸ್ವಾಧೀನ ಕಾಯ್ದೆಯಲ್ಲಿ ಯಾವುದೇ ದೋಷವಿಲ್ಲ. ಇದೊಂದು ಉತ್ತಮ ಕಾಯ್ದೆಯಾಗಿದ್ದು, ಈ ಸಂಬಂಧ ತಾವು ವಿರೋಧ ಎದುರಿಸಲು ಹಾಗೂ ಸಲಹೆ ಸ್ವೀಕರಿಸಲು ಸಿದ್ಧವಿರುವುದಾಗಿ ಹೇಳಿದ್ದಾರೆ.
Advertisement