ಇಬ್ಬರು ಉಗ್ರರ ಎನ್‌ಕೌಂಟರ್: ನಾಲ್ವರು ಯೋಧರಿಗೆ ಗಾಯ

ಭಾರತೀಯ ಸೇನಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಎನ್‌ಕೌಂಟರ್ ಮಾಡಲಾಗಿದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಜಮ್ಮು-ಕಾಶ್ಮೀರ: ಭಾರತೀಯ ಸೇನಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಎನ್‌ಕೌಂಟರ್ ಮಾಡಲಾಗಿದೆ.

ಜಮ್ಮು-ಕಾಶ್ಮೀರದ ಶೋಫಿಯಾನ್ ಎಂಬ ಪ್ರದೇಶದಲ್ಲಿ ಭಾರತೀಯ ಸೇನಾಪಡೆ ಸುದೀರ್ಘ ಕಾರ್ಯಾಚರಣೆ ಕೈಗೊಂಡಿತ್ತು. ಈ ವೇಳೆ ಸೇನಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ.

ಘಟನೆಯಲ್ಲಿ ಲಷ್ಕರ್-ಎ-ತೊಯ್ಬಾ ಸಂಘಟನೆಯ ಇಬ್ಬರು ಉಗ್ರರನ್ನು ಹತ್ಯೆಯಾಗಿದ್ದಾರೆ. ಕಾರ್ಯಾಚರಣೆ ವೇಳೆ ನಾಲ್ವರು ಯೋಧರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com