ಕಾರ್ಪೋರೇಟ್ ಬೇಹು: ಮತ್ತೋರ್ವ ಆರೋಪಿ ಜಿತೇಂದ್ರ ಬಂಧನ

ಕಾರ್ಪೋರೇಟ್ ಬೇಹು: ಜಿತೇಂದ್ರ ಬಂಧನ
ಕಾರ್ಪೋರೇಟ್ ಬೇಹು: ಜಿತೇಂದ್ರ ಬಂಧನ
Updated on

ನವದೆಹಲಿ: ಕಾರ್ಪೋರೇಟ್ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಕ್ರೈಂ ಬ್ರ್ಯಾಂಚ್ ಪೊಲೀಸರು ಮತ್ತೋರ್ವ ಆರೋಪಿಯನ್ನು ಗುರುವಾರ ಬಂಧಿಸಿದ್ದಾರೆ.

ಕೇಂದ್ರ ಪರಿಸರ ಇಲಾಖೆಯ ಜಂಟಿ ಕಾರ್ಯದರ್ಶಿಯ ಆಪ್ತ ಸಹಾಯಕ ಜಿತೇಂದ್ರ ನಾಗ್ಪಾಲ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಚಿವಾಲಯದ ಪ್ರಮುಖ ದಾಖಲೆಗಳನ್ನು ಮತ್ತೋರ್ವ ಆರೋಪಿ ಲೋಕೇಶ್ ಎಂಬಾತನಿಗೆ ನೀಡುತ್ತಿದ್ದ ಎಂಬ ಆರೋಪದ ಮೇಲೆ ಕ್ರೈಂ ಬ್ರ್ಯಾಂಚ್ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೂ ದೆಹಲಿ ಕ್ರೈಂ ಬ್ರ್ಯಾಂಚ್ ಪೊಲೀಸರು 16 ಮಂದಿಯನ್ನು ಬಂಧಿಸಿದ್ದಾರೆ.

ಇದಕ್ಕೂ ಮುನ್ನ ಶಾಸ್ತ್ರಿ ಭವನದಲ್ಲಿ ಮಲ್ಟಿ ಟಾಸ್ಕಿಂಗ್ ಸ್ಟಾಫ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಲೋಕೇಶ್(30) ಎಂಬಾತನನ್ನು ಪೊಲೀಸರು ಬಂಧಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com