ಮಾಜಿ ಪ್ರಧಾನಿ ಮನ್‌ಮೋಹನ್ ಸಿಂಗ್
ಮಾಜಿ ಪ್ರಧಾನಿ ಮನ್‌ಮೋಹನ್ ಸಿಂಗ್

ಕಲ್ಲಿದ್ದಲು ಹಗರಣ: ಸದ್ಯದಲ್ಲೆ ಮಾಜಿ ಪ್ರಧಾನಿ ವಿಚಾರಣೆ

ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಮನ್‌ಮೋಹನ್ ಸಿಂಗ್...

ನವದೆಹಲಿ: ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಮನ್‌ಮೋಹನ್ ಸಿಂಗ್ ಅವರನ್ನು ಸಿಬಿಐ ಸದ್ಯದಲ್ಲೇ ವಿಚಾರಣೆಗೆ ಒಳಪಡಿಸಲಿದೆ ಎಂದು ಮೂಲಗಳು ತಿಳಿಸಿವೆ.

2005ರಲ್ಲಿ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಮಾಡಿದ್ದರಲ್ಲಿ ಹಗರಣ ನಡೆದಿದ್ದು, ಮನ್‌ಮೋಹನ್ ಸಿಂಗ್ ಅವರನ್ನು ವಿಚಾರಣೆಗೆ ಒಳಪಡಿಸುವಂತೆ ಸಿಬಿಐ ವಿಶೇಷ ನ್ಯಾಯಾಲಯ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಸಿಬಿಐ ಕೆಲವೇ ದಿನಗಳಲ್ಲಿ ಡಾ.ಮನಮೋಹನ್‌ಸಿಂಗ್ ಅವರನ್ನು ವಿಚಾರಣೆಗೆ ಒಳಪಡಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಈ ಸಂಬಂಧ ಸಿಬಿಐ ಅಧಿಕಾರಿಗಳು ಮನ್‌ಮೋಹನ್ ಸಿಂಗ್ ಅವರನ್ನು ಯಾವ ದಿನಾಂಕದಂದು ವಿಚಾರಣೆಗೆ ಒಳಪಡಿಸಬೇಕು ಹಾಗೂ ಯಾವ ರೀತಿ ಪ್ರಶ್ನೆಗಳನ್ನು ಕೇಳಬೇಕು ಎಂಬುದರ ಬಗ್ಗೆ ಸಲಹೆ ಪಡೆಯಲು ಕಾನೂನು ಸಲಹೆ ತಜ್ಞರನ್ನು ಭೇಟಿ ಮಾಡಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ. ಕಲ್ಲಿದ್ದಲು ಹಗರಣದ ವಿಚಾರಣೆ ನಡೆಸುತ್ತಿರುವ ಸಿಬಿಐ ವಿಶೇಷ ನ್ಯಾಯಾಲಯ ಮನ್‌ಮೋಹನ್ ಸಿಂಗ್ ಅವರನ್ನು ಇನ್ನು ಏಕೆ ವಿಚಾರಣೆಗೆ ಒಳಪಡಿಸಿಲ್ಲ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿತ್ತು.

ಪ್ರಧಾನಿ ಡಾ.ಮನಮೋಹನ್‌ಸಿಂಗ್ ಅವರು ಕಲ್ಲಿದ್ದಲು ಖಾತೆಯನ್ನು ತಮ್ಮ ಬಳಿ ಇಟ್ಟುಕೊಂಡ ವೇಳೆಯೇ ಈ ಹಗರಣ ನಡೆದಿತ್ತು. ಹೀಗಾಗಿ ಅವರನ್ನು ವಿಚಾರಣೆಗೆ ಒಳಪಡಿಸಿ ಎಂದು ನ್ಯಾಯಾಲಯ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಸಿಂಗ್ ಅವರನ್ನು ವಿಚಾರಣೆ ನಡೆಸಲು ಸಿಬಿಐ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

Related Stories

No stories found.

Advertisement

X
Kannada Prabha
www.kannadaprabha.com