ಅಸಾರಾಂ ಬಾಪುಗೆ ಜಾಮೀನು ನಿರಾಕರಿಸಿದ ಸುಪ್ರೀಂ

ಲೈಂಗಿಕ ಕಿರುಕುಳದ ಆರೋಪದ ಮೇಲೆ ಬಂಧಿತರಾಗಿರುವ ಸ್ವಯಂ ಘೋಷಿತ ದೇವಮಾನವ...
ಅಸಾರಾಂ ಬಾಪು
ಅಸಾರಾಂ ಬಾಪು

ನವದೆಹಲಿ: ಲೈಂಗಿಕ ಕಿರುಕುಳದ ಆರೋಪದ ಮೇಲೆ ಬಂಧಿತರಾಗಿರುವ ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರ ಜಾಮೀನು ಅರ್ಜಿಯನ್ನು ಸೋಮವಾರ ಸುಪ್ರೀಂಕೋರ್ಟ್ ತಿರಸ್ಕರಿಸಿದೆ.

ಅಸಾರಾಂ ಅವರು ಮುಖ ಪಾರ್ಶ್ವವಾಯುವಿನಿಂದ ನರಳುತ್ತಿದ್ದು ಅವರಿಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ಜೋದ್‌ಪುರದ ಆಸ್ಪತ್ರೆ ಹೇಳಿಕೆಯ ಮೇಲೆ ಜಾಮೀನು ನೀಡುವಂತೆ ಅಸಾರಾಂ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಆಸ್ಪತ್ರೆಯ ವರದಿಯನ್ನು ಪರಿಶೀಲಿಸಿದ ಸುಪ್ರೀಂಕೋರ್ಟ್ ಅಸಾರಾಂ ಅವರನ್ನು ಮತ್ತೊಮ್ಮೆ ಪರೀಕ್ಷೆಗೆಂದು ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಪರೀಕ್ಷೆ ನಡೆಸಿತು. ವೈದ್ಯಕೀಯ ವರದಿಯನ್ನು ಇಂದು ಸುಪ್ರೀಂ ಪರಿಶೀಲಿಸಿದ್ದು, ವರದಿಯಲ್ಲಿ ಗಂಭೀರವಾದ ಯಾವುದೇ ತೊಡಕುಗಳು ಇರುವುದು ಕಂಡು ಬರದ ಕಾರಣ ಅಸಾರಾಂ ಬಾಪು ಅವರ ಜಾಮೀನು ಅರ್ಜಿಯನ್ನು ನಿರಾಕರಿಸಿದೆ.

 17 ವರ್ಷದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರಕುಳ ನೀಡಿದ ಆರೋಪದ ಮೇಲೆ 2013ರ ಸೆಪ್ಟಂಬರ್‌ನಲ್ಲಿ ಅಸಾರಾಂ ಅವರನ್ನು ಬಂಧಿಸಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com