
ನವದೆಹಲಿ: ಬಹುನಿರೀಕ್ಷಿತ ದೆಹಲಿ ವಿಧಾನಸಭಾ ಚುನಾವಣೆ ಫೆಬ್ರವರಿ ಎರಡನೇ ವಾರ ನಡೆಯುವ ಸಾಧ್ಯತೆಯಿದೆ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.
ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಸರ್ಕಾರ ರಾಜಿನಾಮೆ ಬಳಿಕ ಯಾವುದೇ ಪಕ್ಷಗಳು ಸರ್ಕಾರ ರಚನೆಗೆ ಆಸಕ್ತಿ ತೋರದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿತ್ತು.
ಚುನಾವಣೆಗೆ ಸಂಬಂಧಿಸಿ ಬಿಜೆಪಿ, ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಸೇರಿದಂತೆ ಎಲ್ಲ ಪ್ರಮುಖ ಪಕ್ಷಗಳು ಈಗಾಗಲೇ ಪ್ರಚಾರ ಕಾರ್ಯ ನಡೆಸುತ್ತಿವೆ.
ಇದು, ಮುಖ್ಯ ಚುನಾವಣಾ ಆಯುಕ್ತರಾದ ವಿ.ಎಸ್ ಸಂಪತ್ ಘೋಷಿಸುವ ಕೊನೆಯ ಚುನಾವಣೆಯಾಗಲಿದೆ.
Advertisement