ರೇಪ್ ತಡೆಗಟ್ಟುವುದು ಸರ್ಕಾರದ ಕೆಲಸವಲ್ಲ: ಅರುಣಾ ಕೋರಿ

ಅರುಣಾ ಕೋರಿ
ಅರುಣಾ ಕೋರಿ

ಲಖನೌ: ಅತ್ಯಾಚಾರವನ್ನು ತಡೆಗಟ್ಟುವುದು ಸಮಾಜದ ಕರ್ತವ್ಯವೇ ಹೊರತು ಸರ್ಕಾರದ ಕೆಲಸವಲ್ಲ ಎಂದು ಉತ್ತರಪ್ರದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಅರುಣಾ ಕೋರಿ ಹೇಳಿದ್ದು, ಇದೀಗ ವಿವಾದಕ್ಕೆ ಕಾರಣವಾಗಿದೆ.

ಅರುಣಾ ಹೇಳಿಕೆ ಇದೀಗ ರಾಜಕೀಯ ಪಕ್ಷಗಳಿಂದ ಟೀಕೆಗೆ ಗುರಿಯಾಗಿದೆ. ಕೋರಿ ಹೇಳಿಕೆ ಬಾಲಿಶವಾದದ್ದು ಎಂದು ಬಿಜೆಪಿ ನಾಯಕ ಸಂಬೀತ್ ಪತ್ರಾ ಹೇಳಿದ್ದಾರೆ. ಅಲ್ಲದೆ ಈ ಕೂಡಲೇ ತಮ್ಮ ಹೇಳಿಕೆಯನ್ನು ವಾಪಸ್ಸು ಪಡೆಯುವಂತೆ ಒತ್ತಾಯ ಪಡಿಸಿದ್ದಾರೆ.

ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರವನ್ನು ತಡೆಗಟ್ಟುವುದನ್ನು ಬಿಟ್ಟು ಈ ರೀತಿ ಹೇಳಿಕೆಗಳನ್ನು ನೀಡುತ್ತಿರುವುದು ದುರದೃಷ್ಟಕರ ಎಂದು ದೆಹಲಿ ಮಹಿಳಾ ಆಯೋಗ ಕೂಡ ಹೇಳಿದೆ.

ಉತ್ತರ ಪ್ರದೇಶದಲ್ಲಿ ಅತ್ಯಾಚಾರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವಾಗ ಒಬ್ಬ ಜವಾಬ್ದಾರಿಯುತ ಸಚಿವರಾಗಿ ಈ ರೀತಿ ಹೇಳಿಕೆ ನೀಡಿರುವುದು ಎಲ್ಲರ ಕೆಂಗಣ್ಣಿಗೆ ಗುರಿಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com