ಸುನಂದಾ ಪುಷ್ಕರ್ ಸಾವು ಸಹಜ ಸಾವಲ್ಲ, ಕೊಲೆ

ಸಂಸದ ಮತ್ತು ಮಾಜಿ ಕೇಂದ್ರ ಸಚಿವ ಶಶಿತರೂರ್ ಅವರ ಪತ್ನಿ ಸುನಂದ ಪುಷ್ಕರ್ (ಸಂಗ್ರಹ ಚಿತ್ರ)
ಸಂಸದ ಮತ್ತು ಮಾಜಿ ಕೇಂದ್ರ ಸಚಿವ ಶಶಿತರೂರ್ ಅವರ ಪತ್ನಿ ಸುನಂದ ಪುಷ್ಕರ್ (ಸಂಗ್ರಹ ಚಿತ್ರ)

ನವದೆಹಲಿ: ಸಂಸದ ಮತ್ತು ಮಾಜಿ ಕೇಂದ್ರ ಸಚಿವ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ಅವರ ಸಾವು ಅಸಹಜ ಎಂದಿರುವ ದೆಹಲಿ ಪೊಲೀಸರು, ಈ ಸಂಬಂಧ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಏಮ್ಸ್ ಆಸ್ಪತ್ರೆಯ ವೈದ್ಯಕೀಯ ವರದಿಯನ್ನಾಧರಿಸಿ ದೆಹಲಿ ಪೊಲೀಸರು ದೂರು ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಕಳೆದ ಡಿಸೆಂಬರ್ 29ರಂದು ಏಮ್ಸ್ ಆಸ್ಪತ್ರೆಯ ವೈದ್ಯರು ನೀಡಿರುವ ಮರಣೋತ್ತರ ವೈದ್ಯಕೀಯ ಪರೀಕ್ಷಾ ವರದಿಯನ್ನಾಧರಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ದೆಹಲಿ ಪೊಲೀಸ್ ಆಯುಕ್ತ ಬಿಎಸ್ ಬಸ್ಸಿ ಅವರು ಹೇಳಿದ್ದಾರೆ.

ವೈದ್ಯಕೀಯ ಪರೀಕ್ಷಾ ವರಿಗಳನ್ವಯ ಸುನಂದಾ ಪುಷ್ಕರ್ ಅವರ ಸಾವು ಅಸಹಜ ಸಾವಿಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಸುನಂದಾ ಅವರ ದೇಹದಲ್ಲಿ ವಿಷಕಾರಿ ಅಂಶಗಳ ಪತ್ತೆಯಾಗಿರುವುದನ್ನು ವೈದ್ಯರು ದೃಢಪಡಿಸಿದ್ದಾರೆ. ಆದರೆ ಎಂತಹ ಮತ್ತು ಯಾವ ರೀತಿ ವಿಷದ ವಸ್ತು ಇತ್ತು ಎನ್ನುವುದರ ಕುರಿತಾದ ವರದಿ ಇನ್ನಷ್ಟೇ ಬರಬೇಕಿದೆ ಎಂದು ಬಸ್ಸಿ ಸ್ಪಷ್ಟಪಡಿಸಿದ್ದಾರೆ.

2014 ಜನವರಿ 17ರಂದು ದೆಹಲಿಯ ಖಾಸಗಿ ಹೊಟೆಲ್‌ನಲ್ಲಿ ಸುನಂದಾ ಪುಷ್ಕರ್ ಅವರು ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದರು. ಲೋಕಸಭೆ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಕಲಾಪದಲ್ಲಿ ಪಾಲ್ಗೊಂಡಿದ್ದ ಪತಿ ಶಶಿತರೂರ್ ಅವರೊಂದಿಗೆ ಸುನಂದ ಪುಷ್ಕರ್ ಅವರು ಖಾಸಗಿ ಹೊಟೆಲ್‌ನಲ್ಲಿ ತಂಗಿದ್ದರು. ಆದರೆ ಜನವರಿ 17ರ ರಾತ್ರಿ ವೇಳೆಗೆ ಸುನಂದಾ ಪುಷ್ಕರ್ ಅವರು ತಮ್ಮ ಕೊಠಡಿಯಲ್ಲಿಯೇ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com