'ವಾದ್ರಾ' ತನಿಖೆ ಆರಂಭವಾಗಿದ್ದು ಯುಪಿಎ ಅವಧಿಯಲ್ಲಿ: ಜೇಟ್ಲಿ

ಕೇಂದ್ರ ಸಚಿವ ಅರುಣ್ ಜೇಟ್ಲಿ
ಕೇಂದ್ರ ಸಚಿವ ಅರುಣ್ ಜೇಟ್ಲಿ
Updated on: 

ನವದೆಹಲಿ: ರಾಬರ್ಟ್ ವಾದ್ರಾ ಅವರ ಅಕ್ರಮ ಭೂ ವ್ಯವಹಾರ ಪ್ರಕರಣದ ಕುರಿತ ತನಿಖೆ ಆರಂಭವಾಗಿದ್ದು ಯುಪಿಎ ಸರ್ಕಾರದ ಅವಧಿಯಲ್ಲೇ ಎಂದು ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರು ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರ ಭೂಹಗರಣ ಪ್ರಕರಣಕ್ಕೆ ಹೊಸ ತಿರುವು ದೊರೆತಿದ್ದು, ಯುಪಿಎ ಆಡಳಿತಾವಧಿಯಲ್ಲಿಯೇ ವಾದ್ರಾಗೆ ನೋಟಿಸ್ ನೀಡಲಾಗಿತ್ತು ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಹೇಳಿದ್ದಾರೆ.

'ವಾದ್ರಾ ವ್ಯವಹಾರಗಳ ಕುರಿತ ತನಿಖೆ ಆರಂಭವಾಗಿದ್ದು ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಲ್ಲ. ಬದಲಿಗೆ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲೇ ಆದಾಯ ತೆರಿಗೆಗೆ ಸಂಬಂಧಿಸಿ ನೋಟಿಸ್ ನೀಡಲಾಗಿತ್ತು ಹಾಗಾಗಿ ನಾನು ಹಣಕಾಸು ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ವಾದ್ರಾ ಕುರಿತು ತನಿಖೆ ಆರಂಭಿಸಿದೆ ಎನ್ನುವ ಆರೋಪದಲ್ಲಿ ಹುರುಳಿಲ್ಲ' ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com