
ಯೆಮೆನ್: ಯೆಮೆನಾದ ಸನಾ ನಗರದಲ್ಲಿ ಉಗ್ರರು ನಡೆಸಿದ ಆತ್ಯಹತ್ಯಾ ಬಾಂಬ್ ದಾಳಿಗೆ 30 ಮಂದಿ ಸಾವನ್ನಪ್ಪಿದ್ದು, ಹಲವು ಮಂದಿ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ.
ಯೆಮೆನಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಂತಿದ್ದ ಮಿನಿ ಬಸ್‌ನಲ್ಲಿ ಸುಮಾರು 50 ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದರು. ಬಸ್ ಚಾಲಕನೇ ಬಾಂಬರ್ ಆಗಿದ್ದು, ಬಸ್‌ನಲ್ಲಿ ಜನ ಸೇರುತ್ತಿದ್ದಂತೆಯೇ ತಾನು ತೊಟ್ಟಿದ್ದ ಆತ್ಮಹತ್ಯಾ ಬಾಂಬ್‌ನ್ನು ಸ್ಪೋಟಿಸಿಕೊಂಡಿದ್ದಾನೆ. ಘಟನೆಯಲ್ಲಿ 30ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇದುವರೆಗೂ ಯಾವುದೇ ಉಗ್ರ ಸಂಘಟನೆಗಳು ಬಾಂಬ್ ದಾಳಿಯ ನೇತೃತ್ವವನ್ನು ವಹಿಸಿಕೊಂಡಿಲ್ಲ.
Advertisement