ಮಹಾರಾಷ್ಟ್ರದ ಸತಾರದಲ್ಲಿ ಸ್ಫೋಟ: ಮೂರು ಸಾವು

ಸತಾರದ ಪವನ ವಿದ್ಯುತ್ ಕೇಂದ್ರದಲ್ಲಿ ಸ್ಫೋಟ ಸಂಭವಿಸಿದ್ದು...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಸತಾರ: ಮಹಾರಾಷ್ಟ್ರದ ಸತಾರದಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ನೌಕರರು ಸಾವನ್ನಪ್ಪಿದ್ದಾರೆ.

ಸತಾರದ ಪವನ ವಿದ್ಯುತ್ ಕೇಂದ್ರದಲ್ಲಿ ಸ್ಫೋಟ ಸಂಭವಿಸಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ನಿರ್ಮಾಣ ಹಂತದಲ್ಲಿ ಪವನ ವಿದ್ಯುತ್ ಕೇಂದ್ರದ ಕಾಮಗಾರಿ ವೇಳೆ ದುರಂತ ಸಂಭವಿಸಿದೆ. ಜಿಲೆಟಿನ್ ಕಡ್ಡಿಗಳ ಬಳಕೆಯಿಂದ ಸ್ಫೋಟ ಸಂಭವಿಸಿದೆ. ಇಂದು ಬೆಳಿಗ್ಗೆ ಸು ಮಾರು 9.30ರ ವೇಳೆಗೆ ಪವನ ವಿದ್ಯುತ್ ತಯಾರಿಕೆ ಘಟಕದಲ್ಲಿ ಜಿಲೆಟಿನ್ ಕಡ್ಡಿಗಳನ್ನು ಬಳಸುತ್ತಿದ್ದ ವೇಳೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ.

ಈ ವೇಳೆ ಕೆಲಸ ಮಾಡುತ್ತಿದ್ದವರ ಪೈಕಿ ಸ್ಥಳದಲ್ಲೇ ಮೂವರು ನೌಕರರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಐವರಿಗೆ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸತಾರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರನ್ನು ಶಶಿಕಾಂತ್ ಕುಲಕರ್ಣಿ(40), ದದಾಸೋ ರಾಮಚಂದ್ರ ಜಗದಲೆ(52) ಮತ್ತು ಸಂದೀಪ್ ಉತ್ತಮ್ ಮನೆ(35) ಎಂದು ಗುರುತಿಸಲಾಗಿದೆ. ಮೃತರೆಲ್ಲರು ಸತಾರ ಮೂಲದವರು ಎಂದು ತಿಳಿದುಬಂದಿದೆ.

ಈ ಕುರಿತು ದಹಿವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆಯನ್ನು ಮುಂದುವರೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com