ಮಯನ್ಮಾರ್‌ನಲ್ಲಿ ಭೂಕುಸಿತ: 5 ಮಂದಿ ಸಾವು

ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಭೀತಿ ಎದುರಾಗಿದೆ...
ಭೂಕುಸಿತ: 5 ಮಂದಿ ಸಾವು
ಭೂಕುಸಿತ: 5 ಮಂದಿ ಸಾವು
Updated on

ಯಾಂಗೋನ್: ಮಯನ್ಮಾರ್‌ನ ಯಾಂಗೋನ್‌ನಲ್ಲಿ ಭೂಕುಸಿತ ಸಂಭವಿಸಿದ ಪರಿಣಾಮ 5 ಮಂದಿ ಸಾವನ್ನಪ್ಪಿದ್ದಾರೆ. ಹಲವು ಮಂದಿ ಮಣ್ಣಿನಲ್ಲಿ ಸಿಲುಕಿದ್ದು, ರಕ್ಷಣಾ ಕಾರ್ಯ ಮುಂದುವರೆದಿದೆ.

ಇಂದು ಬೆಳಿಗ್ಗೆ ಗಣಿಕೆಲಸ ನಿರತರಾಗಿದ್ದ ಮಂದಿ ಭೂಕುಸಿತ ಸಂಭವಿಸಿದ ಪರಿಣಾಮ 5 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಭೀತಿ ಎದುರಾಗಿದೆ.

ಕಳೆದ ಕೆಲ ದಿನಗಳಿಂದ ಯಂಗೋನ್ ಪ್ರದೇಶಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು, ಮಯನ್ಮಾರ್‌ನ ಕಚಿನ್ ರಾಜ್ಯದ ಹದ್ಕೌಂತ್ ಪಟ್ಟಣದಲ್ಲಿರುವ ಜೇಡ್ ಗಣಿಯಲ್ಲಿ ಭೂಕುಸಿ ಉಂಟಾಯಿತು. ಈ ವೇಳೆ ಗಣಿಯಲ್ಲಿ ನೂರಾರು ಮಂದಿ ಕಾರ್ಮಿಕರು ಕೆಲಸದಲ್ಲಿ ನಿರತರಾಗಿದ್ದರು.

ಈ ಅವಘಡದಲ್ಲಿ 5 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಅವಶೇಷಗಳಡಿ ಮತ್ತಷ್ಟು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಆಗಮಿಸಿದ ರಕ್ಷಣಾ ದಳಿ ಸಿಬ್ಬಂದಿ, ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದಾರೆ.

ಈವರೆಗೆ ಒಬ್ಬ ಪುರುಷ ಮತ್ತು ಇಬ್ಬರು ಮಹಿಳೆಯರ ಶವಗಳನ್ನು ಹೊರತೆಗೆಯಲಾಗಿದೆ. ನಿರಂತರ ಮಳೆಯಿಂದಾಗಿ ರಕ್ಷಣಾ ಕಾರ್ಯಕ್ಕೆ ಅಡ್ಡಿಯುಂಟಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com