ಸುಗ್ರೀವಾಜ್ಞೆ ವಿಧೇಯಕ ಜಾರಿಗೊಳಿಸಿದ್ದನ್ನು ಪ್ರತಿಪಕ್ಷಗಳು ಪ್ರಸ್ತಾಪಿಸುವ ಸಾಧ್ಯತೆ
ದೇಶ
ಫೆ.3ನೇ ವಾರ ಕೇಂದ್ರ ಬಜೆಟ್
ಸುಗ್ರೀವಾಜ್ಞೆ ಮೂಲಕ ವಿಧೇಯಕವನ್ನು ಜಾರಿಗೊಳಿಸಿದ್ದನ್ನು ಪ್ರತಿಪಕ್ಷಗಳು ಪ್ರಸ್ತಾಪಿಸುವ ಸಾಧ್ಯತೆ...
ನವದೆಹಲಿ: ಮುಂದಿನ ತಿಂಗಳ 3ನೇ ವಾರದಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ.
ಈ ವೇಳೆ ವಿಮಾ ವಿಧೇಯಕ, ಭೂಸ್ವಾಧೀನ ಮಸೂದೆ ಸೇರಿ ಪ್ರಮುಖ ವಿಧೇಯಕವನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿದ್ದನ್ನು ಪ್ರತಿಪಕ್ಷಗಳು ಪ್ರಮುಖವಾಗಿ ಪ್ರಸ್ತಾಪಿಸುವ ಸಾಧ್ಯತೆ ಹೆಚ್ಚಾಗಿದೆ.
ಹೀಗಾಗಿ ಡಿ.23ರಂದು ಮುಕ್ತಾಯಗೊಂಡ ಚಳಿಗಾಲದ ಅಧಿವೇಶನದಂತೆಯೇ ಕೋಲಾಹಲ ಉಂಟಾಗುವ ಸಾಧ್ಯತೆ ಇದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ವೆಂಕಯ್ಯನಾಯ್ಡು ಪ್ರತಿಪಕ್ಷಗಳ ವಾಗ್ದಾಳಿಯನ್ನು ಎದುರಿಸುವುದಾಗಿ ತಿಳಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ