ಸ್ಪೆಕ್ಟ್ರಂ: ಮಿತ್ತಲ್, ರವಿ ರೂಯಿಯಾ ನಿರಾಳ

ಹೆಚ್ಚುವರಿ ಸ್ಪೆಕ್ಟ್ರಂ ಹಂಚಿಕೆ ಹಗರಣಕ್ಕೆ ಸಂಬಂಧಿಸಿ ಈ ಇಬ್ಬರೂ ಉದ್ಯಮಿಗಳ ವಿರುದ್ಧ ಸಮನ್ಸ್...
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್

ನವದೆಹಲಿ: ಹೆಚ್ಚುವರಿ ಸ್ಪೆಕ್ಟ್ರಂ ಹಗರಣದಲ್ಲಿ ಆರೋಪಿಗಳಾಗಿರುವ ಭಾರತಿ ಸೆಲ್ಯುಲರ್ ಲಿ.ನ ಸಿಎಂಡಿ ಸುನಿಲ್ ಭಾರ್ತಿ ಮಿತ್ತಲ್ ಮತ್ತು ಎಸ್ಸಾರ್ ಗ್ರೂಪ್‌ನ ಪ್ರವರ್ತಕ ರವಿ ರೂಯಿಯ ಅವರು ಸದ್ಯಕ್ಕೆ ನಿರಾಳರಾಗಿದ್ದಾರೆ.

2002ರ ಎನ್‌ಡಿಎ ಅವಧಿಯ ಹೆಚ್ಚುವರಿ ಸ್ಪೆಕ್ಟ್ರಂ ಹಂಚಿಕೆ ಹಗರಣಕ್ಕೆ ಸಂಬಂಧಿಸಿ ಈ ಇಬ್ಬರೂ ಉದ್ಯಮಿಗಳ ವಿರುದ್ಧ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು.

ಆದರೆ, ಈ ಕುರಿತು ಉದ್ಯಮಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ವಿಶೇಷ ನ್ಯಾಯಾಲಯದ ಈ ಆದೇಶವನ್ನು ರದ್ದು ಮಾಡಿದೆ.

ಆರೋಪಿಗಳ ವಿರುದ್ಧ ಪುರಾವೆ ಸಿಕ್ಕರೆ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಿಗೆ ಸಮನ್ಸ್ ಜಾರಿಗೊಳಿಸಲು ಎಲ್ಲ ರೀತಿ ಅಧಿಕಾರ ಇದೆ ಎಂದು ಮುಖ್ಯ ನ್ಯಾಯಮೂರ್ತಿ ಎಚ್.ಎಲ್.ದತ್ತು ಅವರನ್ನೊಳಗೊಂಡ ಪೀಠ ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com