

ನವದೆಹಲಿ: ಲೋಕಸಭೆ ಮತ್ತು ಅದರ ಬಳಿಕ ನಡೆದ ವಿಧಾನಸಭಾ ಚುನಾವಣೆಯಲ್ಲಿನ ಹೀನಾಯ ಸೋಲಿನ ಹಿನ್ನಲೆಯಲ್ಲಿ ಕಾಂಗ್ರೆಸ್ ಸಂಘಟನೆಯಲ್ಲಿ ಮಹತ್ವದ ಬದಲಾವಣೆ ಆಗುವ ಸಾಧ್ಯತೆ ಇದೆ.
ರಾಹುಲ್ ಗಾಂಧಿ ಅವರನ್ನು ಪಕ್ಷದ ಅಧ್ಯಕ್ಷರಾಗಿ ನೇಮಕ ಮಾಡುವ ಸುಳಿವು ಸಿಕ್ಕಿದೆ. ಪ್ರಮುಖ ಮೂರು ವಿಚಾರಕ್ಕೆ ಸಂಬಂಧಿಸಿ ಪಕ್ಷದ ಮುಖಂಡರ ಜತಗೆ ಸರಣಿ ಸಮಾಲೋಚನೆ ನಡೆಸುವಂತೆ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ. ಕಾಂಗ್ರೆಸ್ ಸಿದ್ಧಾಂತ, ಸಂಘಟನಾತ್ಮಕ ಸುಧಾರಣೆ ಮತ್ತು ಪಕ್ಷದ ನೆಲೆಯನ್ನು ವಿಸ್ತರಿಸುವ ನಿಟ್ಟಿನಲ್ಲಿ ಎಲ್ಲ ಹಂತದಲ್ಲಿ ಅಧಿಕಾರಿಗಳ ಉತ್ತರದಾಯಿತ್ವ ಹೆಚ್ಚಳಕ್ಕೆ ಸಂಬಂಧಿಸಿ ಅವರು ಈ ಪತ್ರ ಬರೆದಿದ್ದಾರೆ.
ಮಾರ್ಚ್ ತಿಂಗಳಲ್ಲಿ ನಡೆಯಲಿರುವ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಈ ಕುರಿತು ಕಾರ್ಯಸೂಚಿ ಅಂತಿಮಗೊಳಿಸುವಂತೆಯೂ ಸೂಚಿಸಿದ್ದಾರೆ. ಈ ಕಾರ್ಯಸೂಚಿಯನ್ನು ಸಭೆಯಲ್ಲಿ ಅಂತಿಮಗೊಳಿಸಲಾಗುವುದು.
Advertisement