

ಢಾಕಾ: ಮುಸ್ಲಿಂ ಬಾಹುಳ್ಯವಿರುವ ಬಾಂಗ್ಲಾ ದೇಶದಲ್ಲಿ ಇದೇ ಮೊದಲ ಬಾರಿಗೆ ಹಿಂದೂ ಮೂಲದವರನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿದೆ.
ಹೌದು, ಬಾಂಗ್ಲಾ ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ನ್ಯಾ.ಸುರೇಂದ್ರ ಕುಮಾರ್ ಸಿನ್ಹಾರನ್ನು ಸೋಮವಾರ ದೇಶದ ಅತ್ಯುನ್ನತ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಿಸಲಾಗಿದೆ. ಸಿನ್ಹಾ ಅವರು ಜ.17ರಂದು ಅಧಿಕಾರ ಸ್ವೀಕರಿಸಲಿದ್ದಾರೆ.