

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್‌ಗಾಂಧಿ ಅವರ ಅರ್ಜಿ ವಿಚಾರಣೆ ನಡೆಸಲು ದೆಹಲಿ ಹೈಕೋರ್ಟ್‌ನ ನ್ಯಾ.ವಿ.ಪಿ.ವೈಶ್ ನಿರಾಕರಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿಯನ್ನು ಸೂಕ್ತ ಪೀಠದ ಮುಂದೆ ವಿಚಾರಣೆ ನಡೆಸಬೇಕು ಎಂದು ನಿರ್ದೇಶನ ನೀಡಿದ್ದಾರೆ.
ನ್ಯಾ.ವೈಶ್ ಅವರು ಆ.6 ರಂದು ಪ್ರಕರಣಕ್ಕೆ ಸಂಬಂಧಿಸಿ ಹೊರಡಿಸಲಾಗಿದ್ದ ಸಮನ್ಸ್‌ಗೆ ತಡೆಯಾಜ್ಞೆ ನೀಡಿದ್ದರು.