ದೇಶ

ಕಾಶ್ಮೀರದಲ್ಲಿ ಪರೋಕ್ಷ ಯುದ್ಧಕ್ಕೆ ಪಾಕ್ ಬೆಂಬಲ: ಸೇನಾ ಮುಖ್ಯಸ್ಥ

ಜಮ್ಮು ಮತ್ತು ಕಾಶ್ಮೀರದಲ್ಲಿ ಪರೋಕ್ಷ ಯುದ್ಧಕ್ಕೆ ಪಾಕಿಸ್ತಾನ ಬೆಂಬಲ ನೀಡುತ್ತಿದೆ ಎಂದು ಭಾರತೀಯ..

ಕಾಶ್ಮೀರದಲ್ಲಿ ಪರೋಕ್ಷ ಯುದ್ಧಕ್ಕೆ ಪಾಕ್ ಬೆಂಬಲ: ಸೇನಾ ಮುಖ್ಯಸ್ಥ
ಸೇನಾ ಮುಖ್ಯಸ್ಥ ಜನರಲ್ ದಲ್ಬಿರ್ ಸಿಂಗ್ ಸುಹಾಗ್
Published On :

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಪರೋಕ್ಷ ಯುದ್ಧಕ್ಕೆ ಪಾಕಿಸ್ತಾನ ಬೆಂಬಲ ನೀಡುತ್ತಿದೆ ಎಂದು ಭಾರತೀಯ ಸೇನಾ ಮುಖ್ಯಸ್ಥ ಜನರಲ್ ದಲ್ಬಿರ್ ಸಿಂಗ್ ಸುಹಾಗ್ ಅವರು ಮಂಗಳವಾರ ಆರೋಪಿಸಿದ್ದಾರೆ.

ಪಾಕಿಸ್ತಾನ ಪದೇಪದೆ ಕದನ ವಿರಾಮ ಉಲ್ಲಂಘಿಸುತ್ತಿರುವ ಬಗ್ಗೆ ವರದಿಗಾರರಿಗೆ ಪ್ರತಿಕ್ರಿಯಿಸಿದ ಸೇನಾ ಮುಖ್ಯಸ್ಥರು, ಪಾಕಿಸ್ತಾನ ಸ್ವತಃ ಉಗ್ರರ ದಾಳಿಯಿಂದ ನರಳುತ್ತಿದ್ದರೂ ಜಮ್ಮು ಮತ್ತು ಕಾಶ್ಮೀರದಲ್ಲಿ ಪರೋಕ್ಷ ಯುದ್ಧಕ್ಕೆ ಉಗ್ರರಿಗೆ ಬೆಂಬಲ ನೀಡುತ್ತಿದೆ ಎಂದು ಹೇಳಿದ್ದಾರೆ.

ಭಾರತೀಯ ಸೇನೆ 2014ರಲ್ಲಿ 110 ಉಗ್ರರನ್ನು ಮಟ್ಟ ಹಾಕಿದೆ. ಆದರೆ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನದ ಚಟುವಟಿಕೆಗಳು ಹೆಚ್ಚುತ್ತಿದ್ದು, ಇದರಿಂದ ಭಾರತ ಅತಿ ಹೆಚ್ಚು ಅಪಾಯ ಮತ್ತು ಸವಾಲುಗಳನ್ನು ಎದುರಿಸುತ್ತಿದೆ ಎಂದು ಜನರಲ್ ಸುಹಾಗ್ ತಿಳಿಸಿದ್ದಾರೆ.

ಇದೇ ವೇಳೆ, ಗಡಿಯಲ್ಲಿ ಕಾರ್ಯಾಚರಣೆಯಲ್ಲಿ ತೊಡಗಿರುವ ಸೈನಿಕರು ಯಾವುದೇ ಕ್ರಮ ತೆಗೆದುಕೊಳ್ಳಲು ಮುಕ್ತ ಅವಕಾಶ ನೀಡಲಾಗಿದೆ ಎಂದು ಸುಹಾಗ್ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.