ಕೇಜ್ರಿವಾಲ್ ವಿರುದ್ಧ ಮಾಜಿ ಆಪ್ ನಾಯಕಿ ಶಾಜಿಯಾ ಬಿಜೆಪಿಯಿಂದ ಸ್ಪರ್ಧೆ ಸಾಧ್ಯತೆ

ಆಮ್ ಆದ್ಮಿ ಪಕ್ಷ(ಎಎಪಿ)ದ ಮಾಜಿ ನಾಯಕಿ ಶಾಜಿಯಾ ಇಲ್ಮಿ ಅವರು ನಾಳೆ ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ..
ಶಾಜಿಯಾ ಇಲ್ಮಿ
ಶಾಜಿಯಾ ಇಲ್ಮಿ
Updated on: 

ನವದೆಹಲಿ: ಆಮ್ ಆದ್ಮಿ ಪಕ್ಷ(ಎಎಪಿ)ದ ಮಾಜಿ ನಾಯಕಿ ಶಾಜಿಯಾ ಇಲ್ಮಿ ಅವರು ನಾಳೆ ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ ಎಂದು ಬುಧವಾರ ವರದಿಗಳು ತಿಳಿಸಿವೆ.

ಕಳೆದ ವರ್ಷ ಆಪ್ ತೊರೆದಿದ್ದ ಶಾಜಿಯಾ ಇಲ್ಮಿ, ನವದೆಹಲಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ವಿರುದ್ಧ ಕಣಕ್ಕಿಳಿಯಲ್ಲಿದ್ದಾರೆ ಎನ್ನಲಾಗುತ್ತಿದೆ.

ಈ ಮಧ್ಯೆ, ಕೇಜ್ರಿವಾಲ್ ವಿರುದ್ಧ ಕಾಂಗ್ರೆಸ್ ಸಹ ಮಹಿಳೆಯನ್ನು ಕಣಕ್ಕಿಳಿಸಲು ನಿರ್ಧರಿಸಿದ್ದು, ಮಾಜಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಕಿರಣ್ ವಾಲಿಯಾ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಒಟ್ಟಿನಲ್ಲಿ ನವದೆಹಲಿ ವಿಧಾನಸಭಾ ಕ್ಷೇತ್ರ ತೀವ್ರ ಕುತೂಹಲ ಮೂಡಿಸಿದೆ.

ಇಲ್ಮಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಗಾಜಿಯಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಆಪ್ ಅಭ್ಯರ್ಥಿಯಾಗಿ ಮಾಜಿ ಸೇನಾ ಮುಖ್ಯಸ್ಥ ಜನರಲ್ ವಿ.ಕೆ.ಸಿಂಗ್ ಅವರ ವಿರುದ್ಧ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಬಳಿಕ ಎಎಪಿ ಕೆಲವೊಂದು ತಪ್ಪುಗಳನ್ನು ಮಾಡಿದೆ ಎಂದು ಆರೋಪಿಸಿ ಕಳೆದ ಮೇ 24 ರಂದು ಆಮ್ ಆದ್ಮಿ ಪಕ್ಷಕ್ಕೆ ರಾಜಿನಾಮೆ ನೀಡಿದ್ದರು.

ಫೆಬ್ರುವರಿ 7ರಂದು ಒಂದೇ ಹಂತದಲ್ಲಿ ದೆಹಲಿ ವಿಧಾನಸಭೆಗೆ ಚುನಾವಣೆ ನಡೆಯುತ್ತಿದ್ದು, ಫೆಬ್ರುವರಿ 10ರಂದು ಫಲಿತಾಂಶ ಪ್ರಕಟವಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com