ಪೆಟ್ರೋಲ್, ಡೀಸೆಲ್ ದರ ಇಳಿಕೆ ಸಾಧ್ಯತೆ

ಪೆಟ್ರೋಲ್ ಮತ್ತು ಡೀಸೆಲ್ ದರ ಮತ್ತೆ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ..
ಪೆಟ್ರೋಲ್, ಡೀಸೆಲ್ ದರ ಇಳಿಕೆ (ಸಾಂದರ್ಭಿಕ ಚಿತ್ರ)
ಪೆಟ್ರೋಲ್, ಡೀಸೆಲ್ ದರ ಇಳಿಕೆ (ಸಾಂದರ್ಭಿಕ ಚಿತ್ರ)

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರ ಮತ್ತೆ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಪ್ರತೀ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಸುಮಾರು ರು.2 ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾತೈಲ ದರ ದಿನೇ ದಿನೇ ಇಳಿಕೆಯತ್ತ ಸಾಗುತ್ತಿದ್ದು, ನಿನ್ನೆ ಪ್ರತೀ ಬ್ಯಾರೆಲ್ ದರ 45 ಡಾಲರ್‌ಗಳಿಗಿಂತಲೂ ಕಡಿಮೆಯಾಗಿತ್ತು.

ಇನ್ನು ಕಳೆದ ಜೂನ್ ತಿಂಗಳಿನಿಂದಲೂ ಕಚ್ಛಾ ತೈಲದ ದರ ಇಳಿಕೆಯತ್ತ ಮುಖ ಮಾಡಿದ್ದು, ವಿಶ್ವದ ನಾನಾ ದೇಶಗಳು ತಾವಾಗಿಯೇ ಕಚ್ಛಾತೈಲ ಉತ್ಪಾದನೆಯಲ್ಲಿ ತೊಡಗಿರುವುದರಿಂದ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೇಡಿಕೆಗಿಂತಲೂ ಉತ್ಪಾದನೆ ಹೆಚ್ಚಾಗ ತೊಡಗಿದೆ. ಹೀಗಾಗಿಯೇ ಕಚ್ಛಾ ತೈಲ ದರ ಇಳಿಕೆಯತ್ತ ಮುಖ ಮಾಡಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಇನ್ನು ತೈಲೋತ್ಪನ್ನ ಸಂಸ್ಥೆಗಳು ಕೇಂದ್ರಸರ್ಕಾರದೊಂದಿಗೆ ಚರ್ಚಿಸಲಿದ್ದು, ಶೀಘ್ರದಲ್ಲಿಯೇ ನೂತನ ದರ ಜಾರಿಯಾಗುವ ಸಾಧ್ಯತೆ ಇದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com