ನೀತಿ ಸಂಹಿತೆ ಉಲ್ಲಂಘನೆ: ಕೇಂದ್ರ ಸಚಿವ ನಖ್ವಿಗೆ 1 ವರ್ಷ ಜೈಲು

ಲೋಕಸಭಾ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ್ದ ಕೇಂದ್ರ ಅಲ್ಪಸಂಖ್ಯಾತ ಇಲಾಖೆ ರಾಜ್ಯ ಸಚಿವ...
ಮುಖ್ತಾರ್ ಅಬ್ಬಾಸ್ ನಖ್ವಿ
ಮುಖ್ತಾರ್ ಅಬ್ಬಾಸ್ ನಖ್ವಿ

ರಾಮ್‌ಪುರ್: ಲೋಕಸಭಾ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ್ದ ಕೇಂದ್ರ ಅಲ್ಪಸಂಖ್ಯಾತ ಇಲಾಖೆ ರಾಜ್ಯ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿಗೆ ಉತ್ತರ ಪ್ರದೇಶ ಕೋರ್ಟ್ 1 ವರ್ಷ ಜೈಲು ಶಿಕ್ಷೆ ವಿಧಿಸಿದೆ.  

ಲೋಕಸಭಾ ಚುನಾವಣೆ ವೇಳೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆಂದು 2009ರಲ್ಲಿ ಸಚಿವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಮುಖ್ತಾರ್ ಅಬ್ಬಾಸ್ ನಖ್ವಿಗೆ ನೀತಿ ಸಂಹಿತೆ ಉಲ್ಲಂಘಿಸಿರುವುದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ರಾಮ್‌ಪುರ್ ಸೆಷನ್ಸ್ ಕೋರ್ಟ್ ನಖ್ವಿಗೆ 1 ವರ್ಷ ಜೈಲು ಶಿಕ್ಷೆ ಹಾಗೂ ನಾಲ್ಕು ಸಾವಿರ ದಂಡ ವಿಧಿಸಿದೆ.

2009ರ ಲೋಕಸಭಾ ಚುನಾವಣೆ ವೇಳೆ ಉತ್ತರಪ್ರದೇಶದ ರಾಮ್‌ಪುರದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ನಖ್ವಿ ಅವರು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ ದಾಖಲಾಗಿತ್ತು.

ಐಪಿಸಿ ಸೆಕ್ಷನ್ 341, 342, ಹಾಗೂ 143ರ ಅಡಿ ನಖ್ವಿಗೆ ವಿರುದ್ಧ ಆರೋಪ ಸಾಬೀತಾಗಿದೆ. ಶಿಕ್ಷೆಗೆ ಗುರಿಯಾಗಿದ್ದಾರೆ.

ನಖ್ವಿಗೆ ಜಾಮೀನು
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ  ಕೇಂದ್ರ ಸಚಿವ ನಖ್ವಿಗೆ 1 ವರ್ಷ ಜೈಲು ಶಿಕ್ಷೆ ವಿಧಿಸಿದ ಸೆಷನ್ಸ್ ಕೋರ್ಟ್, ಬಳಿಕ ನಖ್ವಿಗೆ ಜಾಮೀನು ಮಂಜೂರು ಮಾಡಿದೆ.

ಜೈಲು ಶಿಕ್ಷೆಗೆ ಗುರಿಯಾದರು ತಕ್‌ತಕ್ಷಣ ಅವರಿಗೆ ಜಾಮೀನು ಮಂಜೂರಾದ ಹಿನ್ನೆಲೆಯಲ್ಲಿ ನಖ್ವಿ ಜೈಲಿಗೆ ಹೋಗುವ ಪ್ರಮೇಯವಿಲ್ಲ. ಅಲ್ಲದೆ 1 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವುದರಿಂದ ನಖ್ವಿ ಅವರು ತಮ್ಮ ಸಂಸದ ಸ್ಥಾನವನ್ನು ಕಳೆದುಕೊಳ್ಳುವ ಸಾಧ್ಯತೆ ಇಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com