
ನವದೆಹಲಿ: ದೇಶದ ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಕೇಂದ್ರ(ಡಿಆರ್‌ಡಿಒ) ಮುಖ್ಯಸ್ಥ ಅವಿನಾಶ್ ಚಂದರ್ ಅವರನ್ನು ವಜಾಗೊಳಿಸಿರುವುದನ್ನು ಕೇಂದ್ರ ಸರ್ಕಾರ ಸಮರ್ಥಿಸಿಕೊಂಡಿದೆ.
ಯುವ ವಿಜ್ಞಾನಿಗಳಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಹಾಗೂ ಉನ್ನತ ಸ್ಥಾನಕ್ಕೆ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವುದು ಸರಿ ಬರದೆ ಇರುವ ಕಾರಣ ಕೇಂದ್ರ ಸರ್ಕಾರ ಈ ನಿಲುವು ತಾಳಿದೆ ಎಂದು ರಕ್ಷಣಾ ಸಚಿವ ಮನೋಹರ್ ಪರಿಕರ್ ಹೇಳಿದ್ದಾರೆ.
ದೇಶದ ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಕೇಂದ್ರದ ಮುಖ್ಯಸ್ಥರಾಗಿ ಯುವ ವಿಜ್ಞಾನಿಗೆ ಅವಕಾಶ ನೀಡಲು ಚಿಂತನೆ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಡಿಆರ್‌ಡಿಒ ಮುಖ್ಯಸ್ಥರಾಗಿ ಅವರು ಸಂಶೋಧನಾ ಕ್ಷೇತ್ರಕ್ಕೆ ಯಾವುದೇ ನಿರ್ಧಾರ ತೆಗೆದುಕೊಳ್ಳದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಇನ್ನೂ 15 ತಿಂಗಳ ಕಾಲಾವಧಿ ಬಾಕಿ ಇದೆ ಎನ್ನುವಾಗಲೇ ಅವಿನಾಶ್ ಚಂದರ್ ಅವರನ್ನು ನಿನ್ನೆ ವಜಾಗೊಳಿಸಿತ್ತು.
Advertisement