ಸಲ್ಲು ಶಿಕ್ಷೆಗೆ ವಿಧಿಸಿದ್ದ ತಡೆಯಾಜ್ಞೆ ರದ್ದು

ಸಲ್ಮಾನ್ ಖಾನ್
ಸಲ್ಮಾನ್ ಖಾನ್

ನವದೆಹಲಿ: ಕಾನೂನು ಹೋರಾಟದಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಭಾರಿ ಹಿನ್ನಡೆಯಾಗಿದೆ. ಕೃಷ್ಣಮೃಗ ಬೇಟೆ ಪ್ರಕರಣ ಸಂಬಂಧ ಸಲ್ಮಾನ್ ಖಾನ್ ಶಿಕ್ಷೆಗೆ ವಿಧಿಸಿದ್ದ ತಡೆಯಾಜ್ಞೆಯನ್ನು ಬುಧವಾರ ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.

2007ರಲ್ಲಿ ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಸಲ್ಮಾನ್ ಖಾನ್ ತಪ್ಪಿತಸ್ಥ ಎಂದು ರಾಜಸ್ಥಾನದ ಕೆಳ ನ್ಯಾಯಾಲಯ ತೀರ್ಪು ನೀಡಿತ್ತು. ಅಲ್ಲದೆ ಈ ಸಂಬಂಧ ಕೋರ್ಟ್ ಸಲ್ಲುಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಆದರೆ ಕೆಳ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಲ್ಮಾನ್ ಖಾನ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ಪುರಸ್ಕರಿಸಿದ್ದ ರಾಜಸ್ಥಾನ ಹೈಕೋರ್ಟ್, ಸಲ್ಲು ವಿರುದ್ಧದ ಶಿಕ್ಷೆಗೆ ತಡೆಯಾಜ್ಞೆ ವಿಧಿಸಿತ್ತು.

ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜಸ್ಥಾನ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಇಂದು ರಾಜಸ್ಥಾನ ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿದೆ. ಇದರಿಂದಾಗಿ ಸಲ್ಮಾಖ್ ಖಾನ್ ಬ್ರಿಟನ್‌ಗೆ ತೆರಳುವ ಅವಕಾಶ ಕಳೆದುಕೊಳ್ಳಲಿದ್ದಾರೆ.

ಬ್ರಿಟನ್ ಕಾನೂನಿನ ಪ್ರಕಾರ ಯಾವುದೇ ವ್ಯಕ್ತಿ ನಾಲ್ಕು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಯಲ್ಲಿ ಶಿಕ್ಷೆಗೆ ಗುರಿಯಾಗಿದ್ದರೆ, ಅಲ್ಲಿನ ವೀಸಾ ಪಡೆಯಲು ಅನರ್ಹರಾಗಿರುತ್ತಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com