ಸುನಂದಾ ಸಾವು: ಏರ್ ಇಂಡಿಯಾ ಸಿಬ್ಬಂದಿ ವಿಚಾರಣೆ

ಸುನಂದಾ ಪುಷ್ಕರ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳದ ಅಧಿಕಾರಿಗಳು ಏರ್ ಇಂಡಿಯಾ...
ದೆಹಲಿಯ ಇಂದಿರಾಗಾಂಧಿ ವಿಮಾನ ನಿಲ್ದಾಣ (ಸಂಗ್ರಹ ಚಿತ್ರ)
ದೆಹಲಿಯ ಇಂದಿರಾಗಾಂಧಿ ವಿಮಾನ ನಿಲ್ದಾಣ (ಸಂಗ್ರಹ ಚಿತ್ರ)

ನವದಹೆಲಿ: ಸುನಂದಾ ಪುಷ್ಕರ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳದ ಅಧಿಕಾರಿಗಳು ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯ ಸಿಬ್ಬಂದಿಗಳನ್ನು ವಿಚಾರಣೆಗೊಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೆಹಲಿ ಪೊಲೀಸರ ನೇತೃತ್ವದ ವಿಶೇಷ ತನಿಖಾ ತಂಡದ ಅಧಿಕಾರಿಗಳು ಏರ್ ಇಂಡಿಯಾ ಸಿಬ್ಬಂದಿಗಳನ್ನು ವಿಚಾರಣೆಗೊಳಪಡಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಮೂಲಗಳ ಪ್ರಕಾರ ಕಳೆದ ವರ್ಷದ ಜನವರಿ 15ರಂದು ಏರ್ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಿದ್ದ ತರೂರ್ ದಂಪತಿಗಳು ವಿಮಾನದಲ್ಲಿಯೇ ಪರಸ್ಪರ ಕಚ್ಚಾಡಿಕೊಂಡಿದ್ದರು ಎಂಬ ಮಾಧ್ಯಮಗಳ ವರದಿಯನ್ನಾಧರಿಸಿ ವಿಶೇಷ ತನಿಖಾ ದಳದ ಅಧಿಕಾರಿಗಳು ಇಂದು ವಿಮಾನಯಾನ ಸಂಸ್ಥೆಯ ಸಿಬ್ಬಂದಿಗಳನ್ನು ವಿಚಾರಣೆಗೊಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ರಾಷ್ಟ್ರೀಯ ಖಾಸಗಿ ಸುದ್ದಿವಾಹಿನಿಯೊಂದು ತನ್ನ ವರದಿಯೊಂದರಲ್ಲಿ ಕಳೆದ ವರ್ಷದ ಜನವರಿ 15ರಂದು ಏರ್ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಿದ್ದ ತರೂರ್ ದಂಪತಿಗಳು ವಿಮಾನದ ಸಿಬ್ಬಂದಿಗಳ ಎದುರೇ ಪರಸ್ಪರ ಜಗಳ ಮಾಡಿಕೊಂಡಿದ್ದರು. ಈ ವೇಳೆ ಮಧ್ಯ ಪ್ರವೇಶಿಸಿದ್ದ ಸಿಬ್ಬಂದಿಗಳು ಇಬ್ಬರನ್ನೂ ಸಮಾಧಾನಗೊಳಿಸಿದ್ದರು. ಅಲ್ಲದೆ ಸುದ್ದಿವಾಹಿನಿಯು ಇದೇ ವಿಮಾನದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡರೊಬ್ಬರು ಪ್ರಯಾಣಿಸಿದ್ದರು ಎಂದು ವರದಿ ಮಾಡಿತ್ತು ಎಂದು ಹೇಳಲಾಗುತ್ತಿದೆ.

ಇನ್ನು ಪ್ರಕರಣ ಸಂಬಂಧ ವಿಚಾರಣೆ ನಡೆಸುತ್ತಿರುವ ವಿಶೇಷ ತನಿಖಾ ದಳದ ಅಧಿಕಾರಿಗಳು ಅಂದು ತರೂರ್ ದಂಪತಿಗಳೊಂದಿಗೆ ಸಹ ಪ್ರಯಾಣಿಕರಾಗಿದ್ದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರನ್ನು ಕೂಡ ವಿಚಾರಣೆಗೊಳಪಡಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಒಟ್ಟಾರೆ ಸುನಂದಾ ಪುಷ್ಕರ್ ಅವರ ನಿಗೂಢ ಸಾವಿನ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಮಾಧ್ಯಮಗಳ ನಿರಂತರ ವರದಿಯಿಂದಾಗಿ ಶಶಿ ತರೂರ್ ಬೇಸತ್ತಿರುವುದು ಮಾತ್ರ ಸತ್ಯ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com