ಮೋದಿ ಪರ ತೀರ್ಪು ಸ್ವಾಗತಾರ್ಹ: ಅಮೆರಿಕಾ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ 2002ರ ಗುಜರಾತ್ ಗಲಭೆಗೆ ಸಂಬಂಧಪಟ್ಟಂತೆ ಅಮೆರಿಕದಲ್ಲಿ...
ಮೋದಿ ಪರ ತೀರ್ಪು ಸ್ವಾಗತಾರ್ಹ: ಅಮೆರಿಕಾ
Updated on

ವಾಷಿಂಗ್ಟನ್: ಪ್ರಧಾನಿ ನರೇಂದ್ರ ಮೋದಿ ವಿರುದ್ಧ 2002ರ ಗುಜರಾತ್ ಗಲಭೆಗೆ ಸಂಬಂಧಪಟ್ಟಂತೆ ಅಮೆರಿಕದಲ್ಲಿ ಹೂಡಲಾಗಿದ್ದ ಮೊಕದ್ದಮೆ ವಜಾಗೊಳಿಸಿರುವ ನ್ಯಾಯಾಲಯದ ತೀರ್ಪನ್ನು ಅಮೆರಿಕಾ ಸ್ವಾಗತಿಸಿದೆ.

ಗುಜರಾತ್ ಗಲಭೆಗೆ ಅಂದಿನ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಯವರೇ ನೇರ ಹೊಣೆಗಾಹರರಾಗಿದ್ದಾರೆ ಎಂದು ಆರೋಪಿಸಿ ಕೆಲ ಸಂಘಟನೆಗಳು ನ್ಯೂಯಾರ್ಕ್ ಜಿಲ್ಲಾ ನ್ಯಾಯಾಲಯದಲ್ಲಿ ಹೂಡಿದ್ದ ಮೊಕದ್ದಮೆಯನ್ನು  ವಜಾಗೊಳಿಸಿರುವ ನ್ಯಾಯಾಲಯದ ತೀರ್ಪು ಸ್ವಾಗತಾರ್ಹ ಎಂದು ಶುಕ್ರವಾರ ಅಮೇರಿಕಾ ಹೇಳಿದೆ.

ಈ ಕುರಿತಂತೆ ಅಧಿಕೃತ ಹೇಳಿಕೆ ನೀಡಿರುವ ವಿದೇಶಾಂಗ ಇಲಾಖೆ ವಕ್ತಾರ, ಮೋದಿ ಪರವಾದ ತೀರ್ಪು ತೃಪ್ತಿ ತಂದಿದ್ದು, ತೀರ್ಪು ಸ್ವಾಗತಾರ್ಹವಾಗಿದೆ ಎಂದು ಹೇಳಿದ್ದಾರೆ.

2002ರಲ್ಲಿ ಗುಜರಾತ್‌ನಲ್ಲಿ ನಡೆದ ಕೋಮುಗಲಭೆಯನ್ನು ವಿರೋಧಿಸಿ ನ್ಯೂಯಾರ್ಕ್ ಮೂಲದ ಅಮೆರಿಕನ್ ಜಸ್ಟಿಸ್ ಸೆಂಟರ್ ಎಂಬ ಮಾನವ ಹಕ್ಕು ಗುಂಪು ನರೇಂದ್ರ ಮೋದಿ ಅವರ ವಿರುದ್ಧ ಪ್ರಕರಣವನ್ನು ದಾಖಲಿಸಿತ್ತು.

ಪ್ರಕರಣವನ್ನು ವಿಚಾರಣೆ ನಡೆಸಿದ ನ್ಯಾಯಾಧೀಶೆ ಅನಾಲಿಸಾ ಟೊರೆಸ್ ಅವರು, ನರೇಂದ್ರ ಮೋದಿ ಅವರ ಸರ್ಕಾರದ ಮುಖ್ಯಸ್ಥರಾಗಿದ್ದು ನ್ಯಾಯಾಲಯದಲ್ಲಿ ಅವರಿಗೆ ವಿನಾಯಿತಿ ಇದ್ದು, ಪ್ರಕರಣದ ಕುರಿತಂತೆ ನ್ಯಾಯಾಲಯದ ವ್ಯಾಪ್ತಿಯಿಂದ ಹೊರತಾಗಿದ್ದಾರೆ ಎಂದು ತಿಳಿಸಿ ಮೋದಿ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಗುರುವಾರ ವಜಾಗೊಳಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com