
ಬೆಂಗಳೂರು: 'ಮೇಕ್ ಇನ್ ಇಂಡಿಯಾ'ಕ್ಕೆ ಪ್ರೋತ್ಸಾಹಿಸುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಫೆ.18ರಿಂದ 22ರವರೆಗೆ ಯಲಹಂಕ ವಾಯುನೆಲೆಯಲ್ಲಿ ನಡೆಯಲಿರುವ 'ಏರೋ ಇಂಡಿಯಾ-2015'ಕ್ಕೆ ಆಗಮಿಸುವ ಸಾಧ್ಯತೆ ಇದೆ.
ಅವರು ಆಗಮಿಸಿದಲ್ಲಿ ಏರೋ ಇಂಡಿಯಾದಲ್ಲಿ ಭಾಗವಹಿಸಿದ ಮೊದಲ ಪ್ರಧಾನಿಯಾಗಲಿದ್ದಾರೆ. ಐದು ದಿನಗಳ ಕಾಲ ನಡೆಯಲಿರುವ ಉಕ್ಕಿನ ಹಕ್ಕಿಗಳ ಹಾರಾಟ, ಆಧುನಿಕ ರಕ್ಷಣಾ ಸಾಮಗ್ರಿಗಳು, ಶಸ್ತ್ರಾಸ್ತ್ರಗಳ ಪ್ರದರ್ಶನದ ಉದ್ಘಾಟನಾ ಕಾರ್ಯಕ್ರಮಕ್ಕೆ ಮೋದಿ ಆಗಮಿಸಲಿದ್ದಾರೆ. ಬಳಿಕ ಪ್ರದರ್ಶನದ ಐದು ದಿನಗಳಲ್ಲಿ ಮತ್ತೊಮ್ಮೆ ಬೆಂಗಳೂರಿಗೆ ಆಗಮಿಸಿ ಯುದ್ಧ ವಿಮಾನ ಹಾರಾಟ ನಡೆಸಿ ಸೇನಾ ಪಡೆಗಳಿಗೆ ಉತ್ಸಾಹ ತುಂಬುವ ಸಾಧ್ಯತೆಯೂ ಇದೆ.
Advertisement