ದೆಹಲಿಯಲ್ಲಿ ಭಾರಿ ಪ್ರಮಾಣದ ಶಸ್ತ್ರಾಸ್ತ್ರ ವಶ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು..
ಬುಲೆಟ್‌ಗಳ ಕಾರ್ಟ್ರಿಡ್ಜ್‌ಗಳು (ಸಾಂದರ್ಭಿಕ ಚಿತ್ರ)
ಬುಲೆಟ್‌ಗಳ ಕಾರ್ಟ್ರಿಡ್ಜ್‌ಗಳು (ಸಾಂದರ್ಭಿಕ ಚಿತ್ರ)

ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ.

ನಗರದಲ್ಲಿ ಅಕ್ರಮ ಶಸ್ತ್ರಾಸ್ತ್ರಗಳ ರವಾನೆ ಕುರಿತು ಖಚಿತ ಮಾಹಿತಿ ಪಡೆದ ದೆಹಲಿ ಪೊಲೀಸರ ವಿಶೇಷ ತಂಡ ದೆಹಲಿಯ ನಿವಾಸವೊಂದರ ಮೇಲೆ ದಾಳಿ ಮಾಡಿ, ಸುಮಾರು ಸಾವಿರಕ್ಕೂ ಅಧಿಕ ಜೀವಂತ ಬುಲೆಟ್‌ಗಳ ಕಾರ್ಟ್ರಿಡ್ಜ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ ಪ್ರಕರಣ ಸಂಬಂಧ ಮೂವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತರನ್ನು ಸೀತಾಪುರ ನಿವಾಸಿ ಮಹಮದ್ ಇಮ್ರಾನ್, ಮೀರತ್ ಮೂಲದ ಶರೀಖ್ ಮತ್ತು ಉತ್ತರಾಖಂಡದ ಫಾಹೀಮ್ ಎಂದು ಗುರುತಿಸಲಾಗಿದೆ. ದೆಹಲಿ ಮೆಟ್ರೋ ನಿಲ್ದಾಣದ ಬಳಿಯಲ್ಲಿಯ ಕೊಠಡಿಯಲ್ಲಿ ಇವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ದೆಹಲಿ ಪೊಲೀಸ್ ವರಿಷ್ಠಾಧಿಕಾರಿ ಎಸ್‌ಎನ್ ಶ್ರೀವಾತ್ಸವ ಅವರು, ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಕುರಿತು ದೊರೆತ ಮಾಹಿತಿಯನ್ನಾಧರಿಸಿ ಕಾರ್ಯಾಚರಣೆ ನಡೆಸಲಾಗಿದೆ. ಈ ವೇಳೆ 1 ಸಾವಿರದ 20 ಜೀವಂತ ಬುಲೆಟ್‌ಗಳ ಕಾರ್ಟ್ರಿಡ್ಜ್‌ಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಅಲ್ಲದೆ ಪ್ರಕರಣ ಸಂಬಂಧ ಮೂವರನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಗಣರಾಜ್ಯೋತ್ಸವ ದಿನಾಚರಣೆಗೆ ಇನ್ನು ಕೆಲವೇ ದಿನಗಳಿದ್ದು, ಈ ವೇಳೆ ಉಗ್ರರ ದಾಳಿ ಕುರಿತು ಈಗಾಗಲೇ ಗುಪ್ತಚರ ಸಂಸ್ಥೆಗಳು ಮಾಹಿತಿ ನೀಡಿವೆ. ಈ ಹಂತದಲ್ಲಿ ದೆಹಲಿಯಲ್ಲಿ ಶಸ್ತ್ರಾಸ್ತ್ರಗಳು ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಪ್ರಕರಣವನ್ನು ಭದ್ರತಾ ಸಂಸ್ಥೆಗಳು ಮತ್ತು ಪೊಲೀಸ್ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿದ್ದು, ಎಲ್ಲ ಕೋನಗಳಲ್ಲಿಯೂ ತನಿಖೆ ನಡೆಸುವುದಾಗಿ ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com