
ನವದೆಹಲಿ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಕರಾಚಿಗೆ ಬಂದಿದ್ದಾನೆ ಎಂದು ಗುಪ್ತಚರ ಸಂಸ್ಥೆಗಳು ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಿವೆ ಎಂದು ಮೂಲಗಳು ತಿಳಿಸಿವೆ.
ಭೂಗತ ಪಾತಕಿ ಹಾಗೂ 1993ರ ಮುಂಬೈ ಸರಣಿ ಸ್ಫೋಟದ ರುವಾರಿ ದಾವೂದ್ ಇಬ್ರಾಹಿಂ ಪಾಕಿಸ್ತಾನ-ಆಫ್ಘಾನಿಸ್ಥಾನದ ಗಡಿಭಾಗದಲ್ಲಿ ಅವಿತಿದ್ದನು. ಆತನನ್ನು ಪಾಕಿಸ್ತಾನದ ಐಎಸ್‌ಐ ಕರೆಸಿಕೊಂಡಿದೆ ಎಂಬ ಮಾಹಿತಿ ಸಿಕ್ಕಿದೆ.
ಕಳೆದ 20 ವರ್ಷಗಳಿಂದ ಪಾಕಿಸ್ತಾನದಲ್ಲಿ ತಲೆಮರೆಸಿಕೊಂಡಿದ್ದ ದಾವೂದ್ ಇಬ್ರಾಹಿಂಗೆ ಐಎಸ್‌ಐ ರಕ್ಷಣೆ ನೀಡುತ್ತಿದೆ ಎಂಬ ಮಾತು ಕೇಳಿ ಬಂದಿತ್ತು.
ಭಾರತದಲ್ಲಿ ಹುಟ್ಟಿದ ದಾವೂದ್ ಇಬ್ರಾಹಿಂ, ಮುಂಬೈ ಸೇರಿದಂತೆ ದೇಶದ ನಾನಾ ಭಾಗಗಳಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. ಅಲ್ಲದೆ ಮಾದಕ ವಸ್ತು ಸಾಗಾಟ ಈತನ ಪ್ರಮುಖ ಕಸುಬಾಗಿದೆ. ಈತನನ್ನು ಕಳೆದ ಹಲವು ವರ್ಷಗಳಿಂದ ಒಪ್ಪಿಸುವಂತೆ ಪಾಕಿಸ್ತಾನಕ್ಕೆ ಭಾರತ ಮನವಿ ಮಾಡಿದ್ದು, ಆತ ನಮ್ಮದೇಶದಲ್ಲಿ ಇಲ್ಲ ಎಂದು ಪಾಕಿಸ್ತಾನ ವಾದಿಸುತ್ತಿದೆ.
Advertisement