ಸೋನಿಯಾ ಗಾಂಧಿಗೆ ಸಿಐಸಿ ನೋಟಿಸ್

ಮಾಹಿತಿ ಹಕ್ಕಿನಡಿ ಸಲ್ಲಿಸಲಾಗಿದ್ದ ಅರ್ಜಿಗೆ ಉತ್ತರಿಸದೇ ನಿರ್ಲಕ್ಷ್ಯ ಮಾಡಿದ ಕಾಂಗ್ರೆಸ್ ಅಧ್ಯಕ್ಷೆ...
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ

ನವದೆಹಲಿ: ಮಾಹಿತಿ ಹಕ್ಕಿನಡಿ ಸಲ್ಲಿಸಲಾಗಿದ್ದ ಅರ್ಜಿಗೆ ಉತ್ತರಿಸದೇ ನಿರ್ಲಕ್ಷ್ಯ ಮಾಡಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಮತ್ತೊಮ್ಮೆ ಕೇಂದ್ರ ಮಾಹಿತಿ ಆಯೋಗ(ಸಿಐಸಿ) ನೋಟಿಸ್ ಜಾರಿ ಮಾಡಿದೆ.

ಕಳೆದ ವರ್ಷ ಸಲ್ಲಿಸಲಾಗಿದ್ದ ಆರ್‌ಟಿಐ ಅರ್ಜಿಗೆ ನಿಮ್ಮ ಪಕ್ಷ ಏಕೆ ಉತ್ತರಿಸಿಲ್ಲ ಎಂಬ ಬಗ್ಗೆ ವಿವರಣೆ ನೀಡಿ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಎಲ್ಲ ರಾಷ್ಟ್ರೀಯ ಪಕ್ಷಗಳು ಕೂಡ ಆರ್‌ಟಿಐ ವ್ಯಾಪ್ತಿಗೆ ಬರುತ್ತದೆ. ಆದರೆ ಈ ಯಾವ ಪಕ್ಷಗಳೂ ಅರ್ಜಿಗಳಿಗೆ, ಸಂದೇಹಗಳಿಗೆ ಉತ್ತರಿಸಲು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎನ್ನುವ ಮೂಲಕ ಸಿಐಸಿ ಪೀಠ ಅಸಮಾಧಾನ ವ್ಯಕ್ತಪಡಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com